Breaking News

ಆ. 21 ವರೆಗೂ ಭಾರೀ ಮಳೆಯಾಗುವ ಸಾಧ್ಯತೆಬೆಳಗಾವಿ ಸೇರಿ 6 ಜಿಲ್ಲೆಗಳಲ್ಲಿಮುನ್ನಚ್ಚರಿಕೆ

Spread the love

ಬೆಂಗಳೂರು:   ಬೆಳಗಾವಿ, ಧಾರವಾಡ ಸೇರಿ ಕರಾವಳಿ ಭಾಗದಲ್ಲಿ ಆ. 21 ವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜನರು ಮುನ್ನಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಕಲಬುರಗಿ ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕೈದು ದಿನಗಳ ಕಾಲ ಭಾರೀ ಮಳೆ ಸುರಿಯಬಹುದು. ಈ ಹಿನ್ನೆಲೆಯಲ್ಲಿ ಈ  ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕದ ಉತ್ತರ ಒಳನಾಡುಗಳಲ್ಲಿ ಚದುರಿದಂತೆ ಇಂದು ಮತ್ತು ನಾಳೆ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.

ಪಶ್ಚಿಮಘಟ್ಟದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತವಾಗಿ ಮಳೆ ಸುರಿಯುತ್ತಿದ್ದು, ರಾಜ್ಯದ 11 ಜಿಲ್ಲೆಗಳಲ್ಲಿ 56 ತಾಲೂಕುಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಅಲ್ಲದೇ ಅಪಾರ ಹಾನಿಯಾಗಿದೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ