ದಾವಣಗೆರೆ : ಬಿಜೆಪಿ ವಿರುದ್ಧ ಅಪಪ್ರಚಾರ ಮಾಡುತ್ತಿರುವ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಮಾತುಗಳಿಗೆ ಕವಡೆ ಕಾಸಿನ ಬೆಲೆ ಇಲ್ಲ ಎಂದು ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿದರು.
ನಗರದ ಜಿಎಂಐಟಿ ಅತಿಥಿ ಗೃಹಕ್ಕೆ ಅನಿರೀಕ್ಷಿತವಾಗಿ ಭಾನುವಾರ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿಂಧಗಿ, ಹಾನಗಲ್ ಉಪ ಚುನಾವಣೆಯಲ್ಲಿ ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ. ಫಲಿತಾಂಶ ಬಂದ ಮೇಲೆ ನಿಮಗೇ ಗೊತ್ತಾಗುತ್ತದೆ’ ಎಂದರು.
ಎರಡೂ ಕ್ಷೇತ್ರಗಳಲ್ಲೂ ನಾವು ದೊಡ್ಡ ಅಂತರದಿಂದಲೇ ಗೆಲ್ಲುತ್ತೇವೆ. ಹಾನಗಲ್, ಸಿಂಧಗಿ ಕ್ಷೇತ್ರಗಳಲ್ಲಿ ಜನರು ಸಂಪೂರ್ಣವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತದ ಬಿಜೆಪಿ ಪಕ್ಷಕ್ಕೆ ಬೆಂಬಲ ಕೊಡಬೇಕು ಎಂದು ತೀರ್ಮಾನ ಮಾಡಿದ್ದಾರೆ ಎಂದು ಹೇಳಿದರು
Laxmi News 24×7