Breaking News

ಸಿದ್ದರಾಮಯ್ಯ ಅಂಡ್ ಟೀಂ ಸಿಂಧಗಿಯಲ್ಲಿ ಬೀಡುಬಿಟ್ಟಿರೋದೆ ಜೆಡಿಎಸ್ ಸೋಲಿಸಿ, ಬಿಜೆಪಿಯನ್ನು ಗೆಲ್ಲಿಸೋದಕ್ಕಾಗಿ : ಹೆಚ್ ಡಿ ಕುಮಾರಸ್ವಾಮಿ

Spread the love

ಮೈಸೂರು : ಸಿಂದಗಿ ಹಾಗೂ ಹಾನಗಲ್ ಉಪ ಚುನಾವಣೆಯಲ್ಲಿ ಜೆಡಿಎಸ್ ಸೋಲಿಸಿ, ಬಿಜೆಪಿ ಗೆಲ್ಲಿಸೋದೆ ಸಿದ್ಧರಾಮಯ್ಯ ಮತ್ತು ಅವರ ತಂಡದ ಉದ್ದೇಶ ಎಂಬುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಜಿಲ್ಲೆಯ ಸುತ್ತೂರು ಮಠಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಇಂದು ಮಾತನಾಡಿದಂತ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯ ಜಾತಿ ವಿಷ ಬೀಜ ಬಿತ್ತಿ, ಜಾತಿ ಜಾತಿಗಳನ್ನು ಒಡೆದರು. ಇದೇ ರೀತಿಯಲ್ಲೇ ಉಪ ಚುನಾವಣೆಯಲ್ಲಿ ಜಾತಿವಾರು ಸಭೆ ನಡೆಸಿ, ಜಾತಿ ಒಡೆಯುವಂತ ಕೆಲಸ ಮಾಡುತ್ತಿದ್ದಾರೆ. ಜಾತ್ಯಾತೀತರಾಗಿದ್ದರೇ ಹೀಗೆ ಯಾಕೆ ಸಭೆ ನಡೆಸುತ್ತಾರೆ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಅಂಡ್ ಟೀಂ ಸಿಂಧಗಿಯಲ್ಲಿ ಬೀಡುಬಿಟ್ಟಿರೋದೆ ಜೆಡಿಎಸ್ ಸೋಲಿಸಿ, ಬಿಜೆಪಿಯನ್ನು ಗೆಲ್ಲಿಸೋದಕ್ಕಾಗಿ ಆಗಿದೆ. ಸಿಂಧಗಿಯಲ್ಲಿ ಪ್ರಭಲ ಫೈಟ್ ಇರೋದೆ ಜೆಡಿಎಸ್ ಹಾಗೂ ಬಿಜೆಪಿ ನಡುವೆ ಆಗಿದೆ. ಹೀಗಾಗಿ ಅಲ್ಲೇ ಬೀಡುಬಿಟ್ಟಿರುವಂತ ಕಾಂಗ್ರೆಸ್ ನವರು, ಜೆಡಿಎಸ್ ಸೋಲಿಸೋದಕ್ಕೆ ನಿಂತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ