Breaking News

ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ

Spread the love

ಪುತ್ತೂರು, ಅ.25 : ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ವ್ಯಕ್ತಿಯೋರ್ವನ ವಿರುದ್ದ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲಾಗಿದೆ.

ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಮೈಂದನಡ್ಕ ನಿವಾಸಿ ಆದಂ(56) ಎಂಬಾತ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯಾಗಿದ್ದಾನೆ. ಸ್ಥಳೀಯ ಬಾಲಕಿ ಬೀಡಿ ಬ್ರಾಂಚಿಗೆ ತೆರಳುತ್ತಿದ್ದ ವೇಳೆ ಕೃತ್ಯ ಎಸಗಿರುವುದಾಗಿ ಆರೋಪಿಸಲಾಗಿದೆ. ಘಟನೆ ಕುರಿತು ಸಂಪ್ಯ ಪೊಲೀಸರು ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಕೆಪಿಎಸ್‌ಸಿ ನೇಮಕಾತಿ ಅಕ್ರಮ- ಎಸ್‌ಐಟಿ ರಚನೆಗೆ ಸುಪ್ರೀಂ ತಡೆ

Spread the loveನವದೆಹಲಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕೆಪಿಎಸ್‌ಸಿ  ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ