Breaking News

ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ: ಬಿಜೆಪಿ ವಾಗ್ದಾಳಿ

Spread the love

ಬೆಂಗಳೂರು: ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ ಎಂದು ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ.

ಈ ವಿಚಾರವಾಗಿ ಸೋಮವಾರ ಟ್ವೀಟ್‌ ಮಾಡಿರುವ ಬಿಜೆಪಿ, ‘ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ. ಅದೇ ಸಿದ್ದರಾಮಯ್ಯ ಇಂದು ಮತಗಳಿಸಲು ಸುಳ್ಳಿನ ಸರಮಾಲೆ ಸೃಷ್ಟಿಸುತ್ತಿದ್ದಾರೆ’ ಎಂದು ಆರೋಪಿಸಿದೆ.

‘ವೀರಶೈವ, ಲಿಂಗಾಯತ ಎಂದು ವಿಭಜನೆಯ ಬೆಂಕಿ ಹಚ್ಚಿದ ನೀವು ಯಾವ ಆಧಾರದಲ್ಲಿ ಜಾತಿ ಸಮುದಾಯಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂಬುದಾಗಿ ಹೇಳುತ್ತೀರಿ ಸಿದ್ದರಾಮಯ್ಯ?’ ಎಂದು ಬಿಜೆಪಿ ಪ್ರಶ್ನಿಸಿದೆ.

‘ಸಮಾಜವನ್ನು ಜಾತಿ ಆಧಾರದ ಮೇಲೆ ಒಡೆದು ರಾಜಕೀಯ ಲಾಭ ಪಡೆಯುವುದರಲ್ಲಿ ಸಿದ್ದರಾಮಯ್ಯ ಅವರಿಗಿಂತ ನಿಷ್ಣಾತರು ಬೇರೆ ಇಲ್ಲ. ವಿದ್ಯಾರ್ಥಿಗಳ ಪ್ರವಾಸ ಕಾರ್ಯಕ್ರಮದಲ್ಲೂ ಜಾತಿ ಹುಡುಕಿದವರು ನೀವಲ್ಲವೇ ಸಿದ್ದರಾಮಯ್ಯ?’ ಎಂದು ಬಿಜೆಪಿ ಹರಿಹಾಯ್ದಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ