Breaking News

ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿ

Spread the love

ಬೈಂದೂರು: ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪಿಯುಸಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮರವಂತೆಯ ಕಿಶನ್ ಖಾರ್ವಿ(17) ಮೃತಪಟ್ಟ ಬಾಲಕ. ಈತ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ಪಿಯುಸಿ ವಿದ್ಯಾರ್ಥಿಯಾಗಿದ್ದು, ಬೆಳಗ್ಗೆ ದ್ವಿತೀಯ ಪಿಯುಸಿ ಪ್ರವೇಶ ದಾಖಲಾತಿಗಾಗಿ ಕಾಲೇಜಿಗೆ ಬಂದಿದ್ದನು.

ದಾಖಲಾತಿ ಪ್ರಕ್ರಿಯೆ ಮುಗಿಸಿ ವಾಪಸ್ ಮನೆಗೆ ಹೋಗಲು ರಸ್ತೆ ದಾಟುತ್ತಿದ್ದ ವೇಳೆ ಘಟನೆ ನಡೆದಿದೆ.  ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಗಂಡನನ್ನ ಕೊಲೆ ಮಾಡಿ ಹೋಮ ಕುಂಡದಲ್ಲಿ ಸುಟ್ಟ ತಾಯಿ ಮಕ್ಕಳಿಗೆ ಜೀವಾವಧಿ ಶಿಕ್ಷೆ…

Spread the loveಉಡುಪಿ, : ಉಡುಪಿ ಮೂಲದ ಅನಿವಾಸಿ ಭಾರತೀಯ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ