Breaking News

ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿ

Spread the love

ಬೈಂದೂರು: ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪಿಯುಸಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮರವಂತೆಯ ಕಿಶನ್ ಖಾರ್ವಿ(17) ಮೃತಪಟ್ಟ ಬಾಲಕ. ಈತ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ಪಿಯುಸಿ ವಿದ್ಯಾರ್ಥಿಯಾಗಿದ್ದು, ಬೆಳಗ್ಗೆ ದ್ವಿತೀಯ ಪಿಯುಸಿ ಪ್ರವೇಶ ದಾಖಲಾತಿಗಾಗಿ ಕಾಲೇಜಿಗೆ ಬಂದಿದ್ದನು.

ದಾಖಲಾತಿ ಪ್ರಕ್ರಿಯೆ ಮುಗಿಸಿ ವಾಪಸ್ ಮನೆಗೆ ಹೋಗಲು ರಸ್ತೆ ದಾಟುತ್ತಿದ್ದ ವೇಳೆ ಘಟನೆ ನಡೆದಿದೆ.  ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಮದುವೆಯಾಗಿ ಒಂದೇ ತಿಂಗಳಿಗೆ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತ

Spread the loveಉಡುಪಿ : ಸಂಶಯದ ಸುಳಿಯಲ್ಲಿ ಯುವಕನ ಆತ್ಮಹತ್ಯೆ? ಮದುವೆಯಾಗಿ ಒಂದೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತ ಸುದೀಪ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ