Home / ರಾಜಕೀಯ / ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ನಾಗರೀಕರಿಗೊಂದು ‘ಸುವರ್ಣಾವಕಾಶ’, ಇಲ್ಲಿದೆ ಮಾಹಿತಿ

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ನಾಗರೀಕರಿಗೊಂದು ‘ಸುವರ್ಣಾವಕಾಶ’, ಇಲ್ಲಿದೆ ಮಾಹಿತಿ

Spread the love

ಬೆಂಗಳೂರು: ಭಾರತ ಚುನಾವಣಾ ಆಯೋಗವು ದಿನಾಂಕ 01-01-2022 ರ ಅರ್ಹತಾ ದಿನಾಂಕಕ್ಕೆ ಒಳಪಟ್ಟಂತೆ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಪೂರ್ವ ಪರಿಷ್ಕರಣಾ ಕಾರ್ಯಚಟುವಟಿಕೆಗಳಾದ ಮತದಾರರ ಪಟ್ಟಿಗಳಲ್ಲಿ ದೋಷಗಳನ್ನು ಗುರ್ತಿಸಿ ಸರಿಪಡಿಸುವುದು. ಮೃತ ಮತ್ತು ಶಾಶ್ವತವಾಗಿ ಸ್ಥಳಾಂತರಗೊಂಡಿರುವ ಮತದಾರರ ವಿವರಗಳನ್ನು ಗುರ್ತಿಸಿ ಮಾಹಿತಿಯನ್ನು ಸಂಗ್ರಹಿಸುವುದು. ಮತಗಟ್ಟೆಗಳ ಭೌತಿಕ ಪರಿಶೀಲನೆ ಮುಂತಾದವುಗಳನ್ನು ಆಗಸ್ಟ್ 09 ರಿಂದ ಅಕ್ಟೋಬರ್ 31 ರವರೆಗೆ ಮತಗಟ್ಟೆ ಹಂತದ ಅಧಿಕಾರಿಗಳು ಮನೆ ಮನೆ ಭೇಟಿ ನೀಡಿ ಕೈಗೊಳ್ಳಲಾಗುತ್ತಿದ್ದು ಈ ಅವಧಿಯಲ್ಲಿ ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಮತಗಟ್ಟೆ ಹಂತದ ಅಧಿಕಾರಿಗಳಿಗೆ ಮತದಾರರ ಪಟ್ಟಿಗಳಲ್ಲಿ ಮೃತ ಮತ್ತು ಶಾಶ್ವತವಾಗಿ ಸ್ಥಳಾಂತರಗೊಂಡಿರುವ ಮತದಾರರನ್ನು ಗುರ್ತಿಸಲು ಸಂಪೂರ್ಣ ಸಹಕಾರ ನೀಡಬೇಕು.

ಬಿ.ಎಲ್.ಒ.ಗಳು ಮನೆ ಮನೆ ಭೇಟಿ ನೀಡುವ ಸಮಯದಲ್ಲಿ ಕುಟುಂಬಗಳಲ್ಲಿ ದಿನಾಂಕ : 1/1/2022 ಕ್ಕೆ 18 ವರ್ಷ ಪೂರ್ಣಗೊಳ್ಳುವ ಯುವಕ ಯುವತಿಯರನ್ನು ಗುರ್ತಿಸುವ ಕಾರ್ಯವನ್ನು ಕೈಗೊಳ್ಳಲಿದ್ದು, ಎಲ್ಲಾ ಯುವಕ ಯುವತಿಯರು ಈ ಸದವಕಾಶವನ್ನು ಉಪಯೋಗಿಸಿಕೊಂಡು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಭಾರತ ಚುನಾವಣಾ ಆಯೋಗವು ವೋಟರ್ ಹೆಲ್ಪ್ ಲೈನ್ ಆಪ್ ಬಳಸಿಕೊಂಡು ಮೊಬೈಲ್ ಫೋನ್‍ಗಳ ಮೂಲಕ ನಮೂನೆ-6, 7, 8 ಮತ್ತು 8ಎ ರ ಅರ್ಜಿಗಳನ್ನು ಸಲ್ಲಿಸಲು ಅವಕಾಶವನ್ನು ಮುಕ್ತವಾಗಿ ಕಲ್ಪಿಸಿದ್ದು, ಈ ಆಪ್‍ನ್ನು ಡೌನ್‍ಲೋಡ್ ಮಾಡಿಕೊಂಡು ಮತದಾರರಪಟ್ಟಿಗಳಿಗೆ ಹೆಸರನ್ನು ನೋಂದಾಯಿಸಿಕೊಳ್ಳಬೇಕಾಗಿದೆ ಅಂಥ ಚುನಾವಣಾ ಆಯೋಗ ತಿಳಿಸಿದೆ.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ