Breaking News

ಚರ್ಚ್‌ಗಳ ಸಮೀಕ್ಷೆ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

Spread the love

ಬೆಂಗಳೂರು: ರಾಜ್ಯದಲ್ಲಿರುವ ಚರ್ಚ್‌ಗಳ ಸಮೀಕ್ಷೆ ನಡೆಸಲು ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪರಿಶೀಲಿಸಿದ ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಕರ್ನಾಟಕದ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತು ರಾಜ್ ಅವಸ್ತಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

‘ಚರ್ಚ್‌ಗಳು ಇರುವ ವಿಳಾಸ, ಪ್ರಾರ್ಥನಾ ಮಂದಿರ ಇರುವ ಸರ್ವೆ ನಂಬರ್, ಖಾತೆ ಸಂಖ್ಯೆ, ಅಲ್ಲಿರುವ ಪಾದ್ರಿ ಸೇರಿ ಎಲ್ಲಾ ಮಾಹಿತಿ ಕಲೆ ಹಾಕಲು 2021ರ ಜುಲೈ 7 ಮತ್ತು 9ರಂದು ಆದೇಶಿಸಲಾಗಿದೆ. ಇದು ಅಲ್ಪಸಂಖ್ಯಾತ ಸಮುದಾಯದ ವಿರುದ್ಧದ ತಾರತಮ್ಯ ಮತ್ತು ಕಿರುಕುಳದ ಕ್ರಮ’ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

‘ಈ ಸಮೀಕ್ಷೆ ಮೂಲಕ ಚರ್ಚ್‌ಗಳ ಒಳಕ್ಕೆ ನುಸುಳುವಿಕೆಯಷ್ಟೇ ಅಲ್ಲ. ಧಾರ್ಮಿಕ ಅಲ್ಪಸಂಖ್ಯಾತರ ಖಾಸಗಿತನದ ಮೂಲಭೂತ ಹಕ್ಕಿನ ವಿರುದ್ಧದ ಗಂಭೀರ ಹಸ್ತಕ್ಷೇಪ. ಸರ್ವೆಗೆ ಹೊರಡಿಸಿರುವ ಆದೇಶವು ಕಾನೂನು ಬಾಹಿರ ಮತ್ತು ಸಂವಿಧಾನದ 41 ಮತ್ತು 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಿರುವ ಮೂಲಭೂತ ಹಕ್ಕಿನ ಉಲ್ಲಂಘನೆ’ ಎಂದು ದೂರಲಾಗಿದೆ.

‘ಸಮೀಕ್ಷೆ ಕಾರಣ ಏನು ಎಂಬುದನ್ನು ವಿವರಿಸಿಲ್ಲ. ಇದನ್ನು ಗಮನಿಸಿದರೆ ಸರ್ವೆ ನೆಪದಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ಕಿರುಕುಳ ನೀಡುವ ಉದ್ದೇಶ ಇದೆ. ಚರ್ಚ್‌ಗಳನ್ನು ಮಾತ್ರ ಸರ್ವೆಗೆ ಆಯ್ದುಕೊಳ್ಳುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ’ ಎಂದು ಅರ್ಜಿದಾರರ ಪರ ವಕೀಲ ರವಿವರ್ಮಕುಮಾರ್ ವಾದಿಸಿದರು.‌


Spread the love

About Laxminews 24x7

Check Also

ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳಿಗೆ ನಾಳೆಯಿಂದಲೇ ಕಬ್ಬು ನುರಿಸಲು ಅನುಮತಿ ನೀಡಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್​ ಹೇಳಿದ್ದಾರೆ.

Spread the loveಬೆಂಗಳೂರು : ದಾವಣಗೆರೆ ಸೇರಿದಂತೆ ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳಿಗೆ ಅ. 20 ರಿಂದಲೇ ಕಬ್ಬು ಕ್ರಷಿಂಗ್‌ ಆರಂಭಿಸಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ