ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅ.27ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ,ಹಾಸನ,ಕೊಡಗು,ಮಂಡ್ಯ,ಮೈಸೂರು, ರಾಮನಗರ,ಚಿಕ್ಕಮಗಳೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಹೆಚ್ಚು ಮಳೆಯಾಗಲಿದೆ. ಅರಬ್ಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿನ ಮೇಲ್ಮೈ ಸುಳಿಗಾಳಿ ಮತ್ತು ಮುಂಗಾರು ಮಾರುತದ ಹಿನ್ನೆಲೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.
Laxmi News 24×7