Breaking News

ಶುಭ ಸುದ್ದಿ: ಪಿಯು ಕಾಲೇಜ್ ಗಳಲ್ಲಿ 3552 ಅತಿಥಿ ಉಪನ್ಯಾಸಕರ ನೇಮಕಾತಿಗೆ ಅನುಮೋದನೆ

Spread the love

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಈ ಶೈಕ್ಷಣಿಕ ಸಾಲಿನಲ್ಲಿ 3552 ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

2020 -21 ನೇ ಸಾಲಿನಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ನಾನಾ ಕಾರಣಗಳಿಂದ ಖಾಲಿಯಾದ 2832 ಉಪನ್ಯಾಸಕರಿಗೆ 1835 ಅತಿಥಿ ಉಪನ್ಯಾಸಕರನ್ನು 9 ಸಾವಿರ ರೂಪಾಯಿ ಗೌರವಧನದ ಆಧಾರದಲ್ಲಿ ಫೆಬ್ರವರಿಯಿಂದ ನೇಮಕ ಮಾಡಿಕೊಳ್ಳಲಾಗಿತ್ತು. ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಬಹುತೇಕ ಎಲ್ಲ ಮಕ್ಕಳು ಉತ್ತೀರ್ಣರಾಗಿ ಪಿಯು ಕಾಲೇಜ್ ಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾಗಿದೆ. ಹೀಗಾಗಿ ಅತಿಥಿ ಉಪನ್ಯಾಸಕರ ಸಂಖ್ಯೆಯನ್ನು ಕೂಡ ಹೆಚ್ಚಿಸಲಾಗಿದೆ.

10 ಗಂಟೆಯ ಕಾರ್ಯಭಾರಕ್ಕೆ 9 ಸಾವಿರ ರೂಪಾಯಿ ಗೌರವಧನ ನೀಡುತ್ತಿದ್ದು, ಅದನ್ನು 12,000 ರೂ.ಗೆ ಹೆಚ್ಚಳ ಮಾಡುವಂತೆ ಬೇಡಿಕೆ ಕೇಳಿ ಬಂದಿತ್ತು. 12,000 ಗೌರವಧನದಂತೆ ಆರು ತಿಂಗಳಿಗೆ ಅತಿಥಿ ಉಪನ್ಯಾಸಕರಿಗೆ 34.09 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಸರ್ಕಾರ 3552 ಅತಿಥಿ ಉಪನ್ಯಾಸಕರಿಗೆ ಮಾಸಿಕ 9000 ರೂ. ಗೌರವಧನವನ್ನು 8 ತಿಂಗಳಿಗೆ ನೀಡಲು 25.57 ಕೋಟಿ ರೂಪಾಯಿ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಪದವಿಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾಗಿದ್ದು, ಗುಣಮಟ್ಟ ಶಿಕ್ಷಣ ನೀಡುವ ಉದ್ದೇಶದಿಂದ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ 3552 ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು. 9 ಸಾವಿರ ರೂ. ಗೌರವಧನ ನೀಡಲಾಗುವುದು ಎನ್ನಲಾಗಿದೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ