Breaking News

ಕನ್ನಡಕ್ಕಾಗಿ ನಾವುʼ ಅಭಿಯಾನಕ್ಕೆ ಚಾಲನೆ; ‘ಬಾರಿಸು ಕನ್ನಡ ಡಿಂಡಿಮವ’; ವಿಮಾನ ನಿಲ್ದಾಣ, ಮೆಟ್ರೋದಲ್ಲಿಯೂ ಮೊಳಗಿದ ಕನ್ನಡ ಕಲರವ

Spread the love

ಬೆಂಗಳೂರು: ಕನ್ನಡ ರಾಜ್ಯೋತ್ಸವಕ್ಕೆ ಕೆಲವು ದಿನಗಳು ಬಾಕಿ ಇದ್ದರೂ ಇಂದಿನಿಂದಲೇ ಸಂಭ್ರಮಾಚರಣೆ ಆರಂಭವಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ವಿಶಿಷ್ಠವಾಗಿ ಆಚರಿಸಲಾಗುತ್ತಿದ್ದು, ಕನ್ನಡಕ್ಕಾಗಿ ನಾವು ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

 

ವಿಧಾನಸೌಧದ ಮೆಟ್ಟುಲುಗಳ ಮೇಲೆ ಕನ್ನಡಕ್ಕಾಗಿ ನಾವು ಅಭಿಯಾನಕ್ಕೆ ಸಾಮೂಹಿಕ ಗೀತ ಗಾಯನದ ಮೂಲಕ ಸಚಿವ ಸುನೀಲ್ ಕುಮಾರ್ ಚಾಲನೆ ನೀಡಿದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಿಂತು ಸಾವಿರಾರು ಗಾಯಕರು ಕನ್ನಡದ ಪ್ರಸಿದ್ದ ಮೂರು ಹಾಡುಗಳಾದ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು, ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ ಹಾಡುಗಳಿಗೆ ದ್ವನಿಯಾದರು.

ಸಾಮೂಹಿಕ ಗೀತ ಗಾಯನ ಕಾರ್ಯಕ್ರಮದಲ್ಲಿ ಸಚಿವ ಸುನೀಲ್ ಕುಮಾರ್, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಭಾಗಿಯಾಗಿದ್ದರು.

ಕನ್ನಡಕ್ಕಾಗಿ ನಾವು ಅಭಿಯಾನದ ಅಂಗವಾಗಿ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಮಂಗಳೂರು ವಿಮಾನ ನಿಲ್ದಾಣ, ಹುಬ್ಬಳ್ಳಿ ವಿಮಾನ ನಿಲ್ದಾಣಗಳಲ್ಲೂ ಸಹಸ್ರ ಕಂಠ ಗೀತ ಗಾಯನ ನಡೆಯಲಿದೆ. ಇನ್ನು ಮೆಟ್ರೋದ ಎಲ್ಲಾ ರೈಲು ನಿಲ್ದಾಣಗಳಲ್ಲಿಯೂ ಸುಗಮ ಸಂಗೀತ ಗಾಯನ ತಂಡಗಳು ಈ ಮೂರು ಗೀತೆಗಳಿಗೆ ದ್ವನಿಯಾಗಲಿದ್ದಾರೆ. ಒಟ್ಟಾರೆ ಈಬಾರಿ ಕನ್ನಡ ರಾಜ್ಯೋತ್ಸವವನ್ನು ವಿನೂತನವಾಗಿ ಕನ್ನಡಕ್ಕಾಗಿ ನಾವು ಎಂಬ ಅಭಿಯಾನದ ಮೂಲಕ ಆಚರಿಸಲಾಗುತ್ತಿದ್ದು, ನಾಡಿನಾದ್ಯಂತ 5 ಲಕ್ಷಕ್ಕೂ ಹೆಚ್ಚು ಜನರು ಸಾಮೂಹಿಕ ಗೀತ ಗಾಯನದ ಮೂಲಕ ಅಭಿಯಾನಕ್ಕೆ ಬೆಂಬಲ ನೀಡುತ್ತಿರುವುದು ವಿಶೇಷ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ