Breaking News
Home / ರಾಜಕೀಯ / ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್: ಬಿಸಿಯೂಟಕ್ಕೆ ಪೌಷ್ಠಿಕಾಂಶವಿರುವ ಸಾರವರ್ಧಿತ ಅಕ್ಕಿ

ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್: ಬಿಸಿಯೂಟಕ್ಕೆ ಪೌಷ್ಠಿಕಾಂಶವಿರುವ ಸಾರವರ್ಧಿತ ಅಕ್ಕಿ

Spread the love

ರಾಜ್ಯಾದ್ಯಂತ 1 ರಿಂದ 10 ನೇ ತರಗತಿ ಆರಂಭವಾಗಿದ್ದು, ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಕೂಡ ಆರಂಭಿಸಲಾಗಿದೆ.

ಮಕ್ಕಳಿಗೆ ಅಗತ್ಯವಾದ ಪೌಷ್ಠಿಕ ಅಂಶ ಒಳಗೊಂಡ ಸಾರವರ್ಧಿತ ಅಕ್ಕಿಯನ್ನು ಸಾಮಾನ್ಯ ಅಕ್ಕಿಯೊಂದಿಗೆ ಮಿಶ್ರಣ ಮಾಡಿ ಬಿಸಿಯೂಟದಲ್ಲಿ ನೀಡಲಾಗುತ್ತದೆ. ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಬಿಸಿಯೂಟ ನೀಡುತ್ತಿದ್ದು, ಇದರಲ್ಲಿ ಸಾರವರ್ಧಿತ ಅಕ್ಕಿ ಬಳಕೆ ಮಾಡಲಾಗುವುದು.

ಒಂದರಿಂದ ಎಂಟನೇ ತರಗತಿ ಮಕ್ಕಳ ಬಿಸಿಯೂಟಕ್ಕೆ ಕೇಂದ್ರ ಸರ್ಕಾರ ಅಕ್ಕಿ ನೀಡುತ್ತಿದ್ದು, ಪ್ರತಿ ಕ್ವಿಂಟಲ್ ಗೆ 10 ಕೆಜಿಯಂತೆ ಸಾರವರ್ಧಿತ ಅಕ್ಕಿಯನ್ನು ಮಿಶ್ರಣ ಮಾಡಲಾಗಿದೆ. ಅಕ್ಕಿಯ ರೂಪದಲ್ಲಿರುವ ಸಾರವರ್ಧಿತ ಅಕ್ಕಿಯಲ್ಲಿ ಕಬ್ಬಿಣಾಂಶ, ಫೋಲಿಕ್ ಆಸಿಡ್, ವಿಟಮಿನ್ ಎ, ವಿಟಮಿನ್ ಬಿ12, ಸತು ಮೊದಲಾದವುಗಳನ್ನು ಒಳಗೊಂಡಿರುತ್ತದೆ. ಅಕ್ಕಿಕಾಳಿನ ರೂಪದಲ್ಲಿ ಇದನ್ನು ತಯಾರಿಸಲಾಗಿದೆ. ಈ ಅಕ್ಕಿ ಪರೀಕ್ಷೆಗೆ ಒಳಪಡಿಸಿ ಸೇವನೆಗೆ ಯೋಗ್ಯವೆಂದು ಸಾಬೀತಾದ ನಂತರ ಹಂಚಿಕೆ ಮಾಡಲಾಗಿದೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ