Breaking News

ಪ್ರೀತಿಯಲ್ಲಿ ಮೋಸ ಆಗಿದ್ದಕ್ಕೆ ಸಹೋದರ ಆತ್ಮಹತ್ಯೆ; DC ಮುಂದೆ ಗಳಗಳನೇ ಕಣ್ಣೀರಿಟ್ಟ ಯೋಧ..!

Spread the love

ಬೆಳಗಾವಿ: ಪ್ರೀತಿಸಿದ ಹುಡುಗಿಯ ಮನೆಯವರ ವಿರೋಧಕ್ಕೆ ಹೆದರಿ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆಗೆ ಸಂಬಂಧಿಸಿದಂತೆ ಮೃತನ ಸಹೋದರ ಹಾಗೂ ಯೋಧ ನನ್ನ ಕುಟುಂಬಕ್ಕೆ ರಕ್ಷಣೆ ಸಿಗುತ್ತಿಲ್ಲ ಎಂದು ಕಣ್ಣಿರಿಟ್ಟಿದ್ದಾನೆ.

ಪ್ರೀತಿಸಿದ ಹುಡುಗಿ ಮನೆಯವರು ಮದುವೆಗೆ ವಿರೋಧಿಸಿ ಹಲ್ಲೆ ನಡೆಸಿ, ಬೆದರಿಕೆ ಹಾಕಿದ್ದರು. ಇದರಿಂದ ಮನನೊಂದ ತಾಲೂಕಿನ‌ ಬೆನಕನಹಳ್ಳಿಯ 31 ವರ್ಷದ ಭರಮಾ ಪಾಟೀಲ್ ಎಂಬಾತ ಅಕ್ಟೋಬರ್ 23ರಂದು ಆತ್ಮಹತ್ಯೆ ಮಾಡಿಕೊಂಡಿದ್ದ.

 

 

ಸಹೋದರನ ಸಾವು ನೆನೆದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಯೋಧ ಅಸಮಾಧಾನ ವ್ಯಕ್ತಪಡಿಸಿದ್ದು, ದೇಶ ರಕ್ಷಣೆ ಮಾಡುವ ನನಗೆ ನನ್ನ ಕುಟುಂಬಕ್ಕೆ ನ್ಯಾಯ ಸಿಗುತ್ತಿಲ್ಲ ಎಂದು ಕಣ್ಣೀರು ಹಾಕಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿ ಕ್ಯಾಂಪ್ ಪೋಲಿಸರು ನಾಲ್ವರನ್ನು ಬಂಧಿಸಿದ್ದು, ಉಳಿದ ಆರೋಪಿಗಳ ಬಂಧನಕ್ಕೆ ಯೋಧ ಆಗ್ರಹ ಮಾಡಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ