Breaking News

ಸಾರ್ವಜನಿಕರ ಆಸ್ತಿಪಾಸ್ತಿಗೆ ಹಾನಿ ಮಾಡಿದರೆ ಕಠಿಣ ಕ್ರಮ: ಕಮಲ್ ಪಂತ್

Spread the love

ಬೆಂಗಳೂರು: ‘ನಟ ಪುನೀತ್ ರಾಜ್‌ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ. ಗಣ್ಯರಿಗೆ ಪ್ರತ್ಯೇಕ ದ್ವಾರದ ಮೂಲಕ ಪ್ರವೇಶ ನೀಡಲಾಗುತ್ತದೆ. ತಮ್ಮ ನೆಚ್ಚಿನ ನಟನ ಅಂತಿಮ‌ ದರ್ಶನ ಪಡೆಯಲು ಅಭಿಮಾನಿಗಳಿಗೂ ಅವಕಾಶ ನೀಡಲಾಗುತ್ತದೆ’ ಎಂದು ಪೊಲೀಸ್ ಕಮಿಷನರ್ ಕಮಲ್ ಪಂತ್ ತಿಳಿಸಿದರು.

‘ಸಾರ್ವಜನಿಕ‌ ಆಸ್ತಿಪಾಸ್ತಿಗಳಿಗೆ ಹಾನಿ ಮಾಡುವ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಎಚ್ಚರಿಸಿದರು.

‘ಮುಂಜಾಗ್ರತಾ ದೃಷ್ಟಿಯಿಂದ ಶುಕ್ರವಾರ ಮಧ್ಯಾಹ್ನದಿಂದ ಭಾನುವಾರ ಮಧ್ಯರಾತ್ರಿಯವರೆಗೆ ಮದ್ಯದಂಗಡಿಗಳನ್ನು ಬಂದ್ ಮಾಡಿಸಲಾಗುತ್ತಿದೆ. ನಗರದಾದ್ಯಂತ ಕಟ್ಟೆಚ್ಚರ ವಹಿಸಲಾಗುತ್ತಿದ್ದು, ಇದಕ್ಕಾಗಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಗಳನ್ನೂ ನಿಯೋಜಿಸಲಾಗಿದೆ’ ಎಂದು ತಿಳಿಸಿದರು.


Spread the love

About Laxminews 24x7

Check Also

ಮಾಜಿ ಸಚಿವ ಶ್ರೀಮಂತ ಪಾಟೀಲ್ ಇವರ ಜನ್ಮದಿನ ನಿಮಿತ್ಯ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ 4000 ಜನ ಉಚ್ಚಾರಿಸಿಕೊಂಡರು.

Spread the love ಮಾಜಿ ಸಚಿವ ಶ್ರೀಮಂತ ಪಾಟೀಲ್ ಇವರ ಜನ್ಮದಿನ ನಿಮಿತ್ಯ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ