Breaking News

ಯುವರತ್ನನನ್ನು ಕಳೆದುಕೊಂಡು ನಮ್ಮ ಕರುನಾಡು ಬರಿದಾಗಿದೆ: ಎಚ್‌.ಡಿ ದೇವೇಗೌಡ ಬೇಸರ

Spread the love

ಬೆಂಗಳೂರು: ಈ ದಿನ ಯುವರತ್ನನನ್ನು ಕಳೆದುಕೊಂಡು ನಮ್ಮ ಕರುನಾಡು ಬರಿದಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್‌.ಡಿ ದೇವೇಗೌಡರು ಬೇಸರ ವ್ಯಕ್ತಪಡಿಸಿದ್ದಾರೆ.

ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರು ನಿಧನರಾದ ಹಿನ್ನೆಲೆಯಲ್ಲಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಂಬನಿ ಮಿಡಿದಿದ್ದಾರೆ.

‘ಕನ್ನಡ ಚಿತ್ರ ರಂಗದ ಖ್ಯಾತ ಚಿತ್ರನಟ ಯುವರತ್ನ ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತವಾಗಿದೆ. ಅವರ ನಟಿಸಿದ್ದ ‘ಪೃಥ್ವಿ’ ಮತ್ತು ‘ರಾಜಕುಮಾರ’ ಚಿತ್ರವನ್ನು ಅಪ್ಪು ಅವರ ಜೊತೆಯಲ್ಲೇ ನೋಡಿದ್ದೇ. ಈ ದಿನ ಅವರಿಲ್ಲ ಎಂದರೆ ನಂಬಲಸಾಧ್ಯವಾಗಿದೆ. ಈ ದಿನ ಯುವರತ್ನನನ್ನು ಕಳೆದುಕೊಂಡು ನಮ್ಮ ಕರುನಾಡು ಬರಿದಾಗಿದೆ,’ ಎಂದು ದೇವೇಗೌಡರು ಬೇಸರ ವ್ಯಕ್ತಪಡಿಸಿದ್ದಾರೆ.

‘ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ. ದೇವರು ಅವರ ಕುಟುಂಬ ವರ್ಗಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ದುಃಖ ಬರಿಸುವ ಶಕ್ತಿ ತುಂಬಲಿ,’ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ