ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ನಿಧನಕ್ಕೆ ಇಡೀ ರಾಜ್ಯವೇ ಕಂಬನಿ ಸುರಿಯುತ್ತಿದೆ. ಅಪ್ಪು ನಿಧನದಿಂದ ಆಘಾತಕ್ಕೆ ಒಳಗಾಗಿದ್ದ ಅಭಿಮಾನಿಯೊರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಶಿಂಧೊಳ್ಳಿ ಗ್ರಾಮದಲ್ಲಿ ನಿನ್ನೆ ನಡೆದಿದೆ.
ಶಿಂಧೊಳ್ಳಿ ಗ್ರಾಮದ ಪರಶುರಾಮ ದೇಮಣ್ಣವರ್ ಮೃತ ಅಭಿಮಾನಿ. ನಟ ಪುನೀತ್ ರಾಜಕುಮಾರ್ ಅಪ್ಪಟ ಅಭಿಮಾನಿಯಾಗಿದ್ದ ಮೃತ ಪರಶುರಾಮ್ ಟಿವಿಯಲ್ಲಿ ಅಪ್ಪು ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅಳುತ್ತಿದ್ದ. ಇದೇ ವೇಳೆ ರಾತ್ರಿ 11 ಗಂಟೆ ಸುಮಾರಿಗೆ ಹೃದಯಾಘಾತದಿಂದ ನಿಧನವಾಗಿದ್ದಾನೆ.