Breaking News
Home / ಜಿಲ್ಲೆ / ರಾಯಚೂರು / ದಿನಸಿ ಖರೀದಿಗೆ ಹೋಗಿದ್ದ ನಾಲ್ವರು ಅಗತ್ಯ ವಸ್ತುಗಳನ್ನ ಖರೀದಿಸಿ ಮರಳುವಾಗ ನಾಲ್ವರು ನಾಪತ್ತೆ

ದಿನಸಿ ಖರೀದಿಗೆ ಹೋಗಿದ್ದ ನಾಲ್ವರು ಅಗತ್ಯ ವಸ್ತುಗಳನ್ನ ಖರೀದಿಸಿ ಮರಳುವಾಗ ನಾಲ್ವರು ನಾಪತ್ತೆ

Spread the love

ರಾಯಚೂರು: ದಿನಸಿ ತರಲು ತೆಲಂಗಾಣಕ್ಕೆ ತೆರಳಿದ್ದ ರಾಯಚೂರು ತಾಲೂಕಿನ ಕುರ್ವಕಲಾ ನಡುಗಡ್ಡೆ ಗ್ರಾಮದ 13 ಜನ ಮರಳಿ ಬರುವಾಗ ತೆಪ್ಪ ಮುಗುಚಿ ಬಿದ್ದು ನಾಲ್ವರು ನಾಪತ್ತೆಯಾಗಿದ್ದಾರೆ. ಕುರ್ವಾಕಲಾ ಗ್ರಾಮದ ಪಾರ್ವತಿ (55) ನರಸಮ್ಮ (36) ಸುಮಲತಾ (32) ಪೂಜಾ (10) ನಾಪತ್ತೆಯಾದವರು. ತೆಲಂಗಾಣದ ಪಂಚಪಾಡಕ್ಕೆ ದಿನಸಿ ಖರೀದಿಗೆ ಹೋಗಿದ್ದ ನಾಲ್ವರು ಅಗತ್ಯ ವಸ್ತುಗಳನ್ನ ಖರೀದಿಸಿ ಮರಳುವಾಗ ಘಟನೆ ನಡೆದಿದೆ. 13 ಜನರಲ್ಲಿ 9 ಜನ ಈಜಿ ದಡ ಸೇರಲು ಹರಸಾಹಸ ಪಡುತ್ತಿದ್ದಾಗ ದಡದಲ್ಲಿದ್ದ ಪ್ರತ್ಯಕ್ಷದರ್ಶಿಗಳು ಕೂಡಲೇ ತೆಪ್ಪದಲ್ಲಿ ತೆರಳಿ 9 ಜನರನ್ನ ರಕ್ಷಿಸಿದ್ದಾರೆ. ಆದರೆ ತಾಯಿ ಸುಮಲತಾ ಮಗಳು ರೋಜಾ ಸೇರಿ ನಾಲ್ಕು ಜನ ನೀರಿನ ಸೆಳೆತಕ್ಕೆ ನಾಪತ್ತೆಯಾಗಿದ್ದಾರೆ.

ಮಾಹಿತಿ ತಿಳಿದ ತಕ್ಷಣವೇ ಯಾಪಲದಿನ್ನಿ ಪೋಲೀಸರು ನದಿ ದಡಕ್ಕೆ ತೆರಳಿದರಾದ್ರೂ ರಕ್ಷಣಾ ಕಾರ್ಯ ಸಾಧ್ಯವಾಗಿಲ್ಲ. ತೆಲಂಗಾಣದ ಮಕ್ತಲ್ ಠಾಣೆ ಪೊಲೀಸರು, ಅಲ್ಲಿನ ತೆಪ್ಪ ನಡೆಸುವವರು ಕೂಡಲೇ ರಕ್ಷಣಾ ಕಾರ್ಯಚರಣೆ ಮಾಡಿದ್ದಾರೆ. ಆದರೆ ಮೂವರು ಮಹಿಳೆಯರು ಹಾಗೂ ಓರ್ವ ಬಾಲಕಿ ನೀರಿನಲ್ಲಿ ನಾಪತ್ತೆಯಾಗಿದ್ದಾರೆ. ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್, ರಾಯಚೂರು ಸಹಾಯಕ ಆಯುಕ್ತ ಸಂತೋಷ್ ಹಾಗೂ ಎನ್ ಡಿ ಆರ್ ಎಫ್ ತಂಡ ತೆಲಂಗಾಣಕ್ಕೆ ತೆರಳಿದ್ದು ಬೆಳಿಗ್ಗೆಯಿಂದ ನಾಪತ್ತೆಯಾದ ನಾಲ್ವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿಸಲಿದ್ದಾರೆ.

 

ದಿನೇದಿನೇ ಗೋಕಾಕ ನಗರದ ಘಟಪ್ರಭಾ ನದಿಯ ನೀರಿನ ಪ್ರಮಾಣ ಹೆಚ್ಚುತ್ತಿದೆ ಇನ್ನು ನೀರಿನ ಪ್ರಮಾಣ ಹೆಚ್ಚುವ ಸಾಧ್ಯತೆ ಇದೆ.

Laxmi News 24×7 यांनी वर पोस्ट केले सोमवार, १७ ऑगस्ट, २०२०

 


Spread the love

About Laxminews 24x7

Check Also

ಯರಗುಂಟಿ ಗ್ರಾಮದಲ್ಲಿ 10ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ: ಆಸ್ಪತ್ರೆಗೆ ದಾಖಲು

Spread the love ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಗುಂಟಿ ಗ್ರಾಮದಲ್ಲಿ 10ಕ್ಕೂ ಜನರು ವಾಂತಿ – ಭೇದಿಯಿಂದ ಅಸ್ವಸ್ಥರಾಗಿದ್ದು, ಪಟ್ಟಣದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ