ಧಾರವಾಡದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮ್ಯಾನೇಜರ್ ಮೇಲೆ ಎಸಿಬಿ ರೆಡ್: ದಾಳಿಯಲ್ಲಿ 5 ಲಕ್ಷಕ್ಕೂ ಅಧಿಕ ನಗದು ಹಣ ವಶಕ್ಕೆ.*
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ಸರ್ಕಾರಿ ಕೆಲಸ ಕಾರ್ಯಗಳಿಗೆ ಬಂದಂತಹ ಸಾರ್ವಜನಿಕರಿಗೆ ಹಣಕ್ಕೆ ಬೇಡಿಕೆ ಇಡುತ್ತಿದ್ದ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ, ಧಾರವಾಡದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮ್ಯಾನೇಜರ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಧಾರವಾಡ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮ್ಯಾನೇಜರ್ ಆಗಿರುವ ಶಿವಶಂಕರ್ ಹಿರೇಮಠ ಕರ್ತವ್ಯ ನಿರ್ವಹಿಸುತ್ತಿದ್ದ ಕಚೇರಿ ಹಾಗೂ ಉಳವಿ ಚೆನ್ನಬಸವೇಶ್ವರ ನಗರದಲ್ಲಿರುವ ಮನೆ ಮೇಲೂ ಎಸಿಬಿ ಅಧಿಕಾರಿಗಳು ಮಾಡಿದ್ದಾರೆ.
ಗದಗ ಎಸಿಬಿ ಹಾಗೂ ಧಾರವಾಡ ಎಸಿಬಿ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದ್ದು, ದಾಳಿಯ ವೇಳೆಯಲ್ಲಿ ಶಿವಶಂಕರ ಹಿರೇಮಠ ಮನೆಯಲ್ಲಿ ಸುಮಾರು 3ಲಕ್ಷಕ್ಕೂ ಅಧಿಕ ಹಣ ಹಾಗೂ ಕಚೇರಿಗೆ ತಂದ ಕಾರಿನಲ್ಲಿ 1 ಲಕ್ಷದಾ 25 ಸಾವಿರ ಒಟ್ಟು 5 ಲಕ್ಷಕ್ಕೂ ಅಧಿಕ ನಗದು ಹಣವನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ತಡ ರಾತ್ರಿಯು ಕೂಡಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮ್ಯಾನೇಜರ್ ಶಿವಶಂಕರ್ ಹಿರೇಮಠ ಮನೆ ಹಾಗೂ ಕಚೇರಿಯಲ್ಲಿ ಎಸಿಬಿ ಅಧಿಕಾರಿಗಳು ಬೀಡು ಬಿಟ್ಟಿದ್ದು ದಾಖಲಾತಿಗಳನ್ನು ಪರಿಶೀಲನೆ ಕೈಗೊಂಡಿದ್ದಾರೆ.