Breaking News

ಆತ್ಮೀಯ ಮಿತ್ರನಿಗೆ ಸಿಎಂ ಮುತ್ತಿನ ವಿದಾಯ

Spread the love

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಂತ್ಯಕ್ರಿಯೆ ಭಾನುವಾರ ಬೆಳಗ್ಗೆ ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಿತು.

ಪುನೀತ್ ರಾಜಕುಮಾರ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಹಲವು ಸಚಿವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹಾಜರಿದ್ದು ಅಂತಿಮ ನಮನ ಸಲ್ಲಿಸಿದರು.

 

ನಸುಕಿನಲಿ ಪುನೀತ್ ರಾಜ್‍ಕುಮಾರ್ ಅಂತಿಮಯಾತ್ರೆ ಮುಕ್ತಾಯಗೊಂಡಿತು. ಸೂರ್ಯ ಉದಯಿಸುವ ಮುಂಚೆಯೇ ಪುನೀತ್ ಪಾರ್ಥೀವ ಶರೀರ ಕಂಠೀರವ ಸ್ಟೇಡಿಯಂ ತಲುಪಿತು.

ನಿಗದಿಗಿಂತ ಸಮಯಕ್ಕಿಂತ ಎರಡು ಗಂಟೆ ಮುಂಚೆ ಆರಂಭವಾದ ಅಂತಿಮಯಾತ್ರೆ ಆರಂಭವಾಯಿತು.

ಬೆಳಿಗ್ಗೆ 6.30 ಕ್ಕೆ ಕ್ರೀಡಾಂಗಣ ಬಿಟ್ಟು, 8 ಕ್ಕೆ ಸ್ಟೂಡಿಯೋ ತಲುಪಲು ಉದ್ದೇಶಿಸಲಾಗಿತ್ತು.‌ಆದರೆ, ಅಭಿಮಾನಿಗಳ ದಟ್ಟಣೆ ಕಡಿಮೆಯಾಗದ ಮತ್ತು ರಸ್ತೆಯಲ್ಲಿ ಅಭಿಮಾನಿಗಳ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ 4 ಗಂಟೆಗೆ ಅಂತಿಮ ದರ್ಶನ ಸ್ಥಗಿತಗೊಳಿಸಲಾಯಿತು. ಸರಿಯಾಗಿ ಬೆಳಗಿನ ಜಾವ 5 ಕ್ಕೆ ಅಂತಿಮಯಾತ್ರೆ ಆರಂಭವಾಯಿತು. ಗಾಜಿನ ಛಾವಣಿಯ ತೆರೆದ ವಾಹನದಲ್ಲಿ ಪುನೀತ್ ಪಾರ್ಥೀವ ಶರೀರ ಕಾಣುವಂತೆ ಇಡಲಾಗಿದ್ದು, ಕುಟುಂಬಸ್ಥರು ಪಕ್ಕದಲ್ಲಿ ಕುಳಿತಿದ್ದರು.

ಬೆಳಿಗ್ಗೆ 5.05ಕ್ಕೆ ಕಂಠೀರವ ಕ್ರೀಡಾಂಗಣದಿಂ‌ದ ಹೊರಟು ಹಡ್ಸನ್ ಸರ್ಕಲ್, ಕೆ.ಜಿ.ರಸ್ತೆ, ಮೈಸೂರು ಬ್ಯಾಂಕ್ ವೃತ್ತ, ಕೆ.ಆರ್.ಸರ್ಕಲ್, ಮಹಾರಾಣಿ ಕಾಲೇಜು, ಚಾಲುಕ್ಯ ಸರ್ಕಲ್, ವಿಂಡ್ಸರ್ ಮ್ಯಾನರ್ ಹೋಟೆಲ್ ವೃತ್ತ, ಬಿಡಿಎ, ಗುಟ್ಟಹಳ್ಳಿ, ಕಾವೇರಿ ಜಂಕ್ಷನ್, ಬಾಷ್ಯಂ ಸರ್ಕಲ್, ಸ್ಯಾಂಕಿ ರಸ್ತೆ, ಮಲ್ಲೇಶ್ವರ, ಐಐಎಸ್ಸಿ, ಯಶವಂತಪುರ ಮೇಲ್ಸೇತುವೆ, ಗೋವರ್ಧನ್ ಥಿಯೇಟರ್, ಗೊರಗುಂಟೆಪಾಳ್ಯ ಮೆಟ್ರೋ‌ನಿಲ್ದಾಣ ಮೂಲಕ 5.47ಕ್ಕೆ ಕಂಠೀರವ ಸ್ಟುಡಿಯೋ ತಲುಪಿತು.

ಪೊಲೀಸ್ ಬಗಿ ಭದ್ರತೆಯಲ್ಲಿ ಯಾತ್ರೆ ಸಾಗಿದ್ದು, ಒಂದು ಕಿ.ಮೀ ಅಂತರದಲ್ಲಿ ಸಾರ್ವಜನಿಕರ ವಾಹನ ನಿಷೇಧಿಸಲಾಗಿತ್ತು.

ಗುಟ್ಟಹಳ್ಳಿ, ಮಲ್ಲೇಶ್ವರ, ಯಶವಂತಪುರ, ತುಮಕೂರು ರಸ್ತೆಯ ಇಕ್ಕೆಲಗಳಲ್ಲಿ ಅಭಿಮಾನಿಗಳು ನಿಂತು ಅಂತಿಯಯಾತ್ರೆ ಕಣ್ತುಂಬಿಕೊಂಡರು.

ಮುಖ್ಯಮಂತ್ರಿ ಬೊಮ್ಮಾಯಿ ಅವರು ಪುನೀತ್ ಅವರ ಪತ್ನಿ ಅಶ್ವಿನಿ ಅವರಿಗೆ ರಾಷ್ಟ್ರಧ್ವಜವನ್ನು ಹಸ್ತಾಂತರಿಸಿದರು.

ಆತ್ಮೀಯ ಮಿತ್ರನಿಗೆ ಸಿಎಂ ಮುತ್ತಿನ ವಿದಾಯ


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ