ಬೆಂಗಳೂರು : ಹೃದಯಾಘಾತದಿಂದ ನಿಧನಹೊಂದಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್ ಕುಮಾರ್ ಹಾಗೂ ಪಾರ್ವತಮ್ಮ ರಾಜ್ ಕುಮಾರ್ ಸಮಾಧಿಯ ಪಕ್ಕದಲ್ಲೇ ಈಡಿಗ ಸಂಪ್ರದಾಯದಂತೆ ನಡೆದಿದೆ.
ಅಪಾರ ಸಂಖ್ಯೆಯ ಜನ ಅಂತಿಮ ದರ್ಶನ ಪಡೆದ ನಂತರ ಕಂಠೀರ ಸ್ಟೇಡಿಯಂನಿಂದ ಪುನೀತ್ ರಾಜ್ ಕುಮಾರ್ ಪಾರ್ಥಿವ ಶರೀರದ ಮೆರವಣಿಗೆ ಮೂಲಕ ಕಂಠೀರವ ಸ್ಟುಡಿಯೋ ತಲುಪಿತು. ಕಂಠೀರವ ಸ್ಟುಡಿಯೋದಲ್ಲಿ ರಾಜ್ ಕುಮಾರ್ ಕುಟುಂಬದವರು ಬಂಧುಗಳು ಮತ್ತು ಗಣ್ಯರು ಭಾಗಿಯಾಗಿದ್ದರು. ಪುನೀತ್ ರಾಜ್ ಕುಮಾರ್ ಪಾರ್ಥೀವ ಶರೀರದ ಅಂತಿಮ ವಿಧಿ ವಿಧಾನ ಕಾರ್ಯವನ್ನು ಪುನೀತ್ ಸಹೋದರ ರಾಘವೇಂದ್ರ ರಾಜ್ ಕುಮಾರ್ ಪುತ್ರ ವಿನಯ್ ರಾಜ್ ಕುಮಾರ್ ನೆರವೇರಿಸಿದರು. ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ, ಪುತ್ರಿಯರಾದ ವಂದನಾ ಮತ್ತು ಧೃತಿ ತಾಯಿಯನ್ನು ತಬ್ಬಿಕೊಂಡು ಕಣ್ಣೀರುಡುತ್ತಿದ್ದರೆ, ಇತ್ತ ಸಹೋದರ ಶಿವರಾಜ್ ಕುಮಾರ್ ಬಿಕ್ಕಿಬಿಕ್ಕಿ ಅಳುವುದು ಎಲ್ಲರ ಮನಕಲಕುವಂತಿದೆ.