ಗೋವಾದ ಜಾಗೊರ್‍ನಲ್ಲಿ ಇಂದು ಎಐಸಿಸಿ ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.
ಮುಂದಿನ ವರ್ಷ ನಡೆಯಲಿರುವ ಗೋವಾ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ರಾಹುಲ್ ಗಾಂಧಿ ಅವರು ಸಮಾವೇಶದಲ್ಲಿ ಪಾಲ್ಗೊಂಡಿದ್ದ ಸಾವಿರಾರು ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು. ಗೋವಾ ಕಾಂಗ್ರೆಸ್ ಉಸ್ತುವಾರಿಯಾದ ಮಾಜಿ ಸಚಿವ ದಿನೇಶ್ ಗುಂಡೂರಾವ್, ಗೋವಾ ಚುನಾವಣಾ ಉಸ್ತುವಾರಿ ಪಿ.ಚಿದಂಬರಂ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸೇರಿದಂತೆ ಗೋವಾ ಕಾಂಗ್ರೆಸ್ ನಾಯಕರು ಹಾಗೂ ರಾಷ್ಟ್ರಮಟ್ಟದ ನಾಯಕರು ಉಪಸ್ಥಿತರಿದ್ದರು.
Laxmi News 24×7