Breaking News

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರಿಗೆ ಮನವಿ

Spread the love

ಹೊಸದಿಲ್ಲಿ: ರಾಷ್ಟ್ರೀಯ ಜಲ ನೀತಿಯನ್ನು ರೂಪಿಸುವುದು ಮತ್ತು ಅತಿವೃಷ್ಟಿಯನ್ನು ತಡೆಯಲು ನದಿಗಳ ಜೋಡಣೆ ಮಾಡುವ ಯೋಜನೆ ರೂಪಿಸುವ ದೃಷ್ಟಿಯಿಂದ ಪಕ್ಷವು ನಿರ್ದಿಷ್ಟ ಕಾರ್ಯಕ್ರಮ ರೂಪಿಸಬೇಕೆಂದು ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರಿಗೆ ಮನವಿ ಮಾಡಿದರು. 
ನವದೆಹಲಿಯ ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ಈ ಭೇಟಿಯ ಸಮಯದಲ್ಲಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯ ಯೋಜನೆಗಳನ್ನು  ಜನಸಾಮಾನ್ಯರಿಗೆ ಮುಟ್ಟಿಸುವಲ್ಲಿ ಪಕ್ಷದ ಕಾರ್ಯಕರ್ತರು ತೊಡಗಿದ್ದಾರೆ. ಪಕ್ಷದ ಸಂಘಟನೆಯ ಜೊತೆಗೆ ನೀರು ಪೋಲಾಗುವುದನ್ನು ತಡೆಯುವ, ವ್ಯರ್ಥವಾಗಿ ಹರಿಯುವ ನೀರನ್ನು ಸದ್ಬಳಕೆ‌ ಮಾಡುವಂತಹಾ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ರೂಪಿಸುವಂತೆ ಕೋರಿದರು.
ಪಕ್ಷ ಮತ್ತು ಸರ್ಕಾರದ ಮಧ್ಯೆ ಇರುವ ಜನಸಾಮಾನ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಜನರ ಸಹಭಾಗಿತ್ವದಲ್ಲಿಯೇ ಪರಿಣಾಮಕಾರಿಯಾಗಿ ಕೆಲಸ ಮಾಡಿ, ಪಕ್ಷದ ಸಂಘಟನೆಯ ಚಟುವಟಿಕೆಗಳನ್ನು ವಿಸ್ತರಿಸಿ ಎಂದು ಭೇಟಿಯ ವೇಳೆ,  ಜೆ ಪಿ ನಡ್ಡಾ ಅವರು ಸಚಿವ ರಮೇಶ್ ಜಾರಕಿಹೊಳಿ‌ ಅವರಿಗೆ ಸೂಚಿಸಿದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ