ಮತ ಎಣಿಕೆಗೆ ಚುನಾವಣಾ ಆಯೋಗ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ. ಇಂದು ಮಧ್ಯಾಹ್ನ 12 ಗಂಟೆ ವೇಳೆಗೆ ಸಿಂದಗಿ ಹಾಗೂ ಹಾನಗಲ್ ಎರಡೂ ಕ್ಷೇತ್ರಗಳ ಸ್ಪಷ್ಟ ಚಿತ್ರಣ ಸಿಗಲಿದೆ. ಬಳಿಕ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ಎದುರಿಸುತ್ತಿರುವ ಮೊದಲ ಚುನಾವಣೆ ಇದಾಗಿದೆ.
ಸಿಂದಗಿಯಲ್ಲಿ ಕಾಂಗ್ರೆಸ್ ನಿಂದ ಅಶೋಕ್ ಮನಗೂಳಿ, ಬಿಜೆಪಿಯಿಂದ ರಮೇಶ್ ಭೂಸನೂರು ಮತ್ತು ಜೆಡಿಎಸ್ ನಿಂದ ನಾಜೀಯಾ ಅಂಗಡಿ ಕಣದಲ್ಲಿದ್ದಾರೆ. ಇತ್ತ ಹಾನಗಲ್ ನಲ್ಲಿ ಕಾಂಗ್ರೆಸ್ ನಿಂದ ಶ್ರೀನಿವಾಸ್ ವಿ ಮಾನೆ, ಬಿಜೆಪಿಯಿಂದ ಶಿವರಾಜ್ ಸಜ್ಜನ್ ಮತ್ತು ಜೆಡಿಎಸ್ ನಿಂದ ನಿಯಾಜ್ ಶೇಕ್ ಸ್ಪರ್ಧೆಯಲ್ಲಿದ್ದಾರೆ. ಮೂರು ಪಕ್ಷಗಳ ನಾಯಕರೂ ಸಹ ಗೆಲ್ಲುವ ವಿಶ್ವಾಸ ತೋರುತ್ತಿದ್ದಾರೆ. ಆದರೆ ಮತದಾರ ಯಾರ ಕೈ ಹಿಡಿದಿದ್ದಾನೆ ಎಂಬುದೇ, ಸದ್ಯಕ್ಕೆ ಇರುವ ಕುತೂಹಲವಾಗಿದೆ. ಅ.28ರಂದು ಎರಡೂ ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು