ಹಾವೇರಿ: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆಗೆ ಕ್ಷ ಆರಂಭವಾಗಿದೆ. ಹಾವೇರಿ ಹೊರವಲಯದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆಗೆ ಸಿದ್ಧತೆ ಕೈಗೊಳ್ಳಲಾಗಿದೆ.
ಈಗಾಗಲೇ ಮತ ಎಣಿಕೆ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಮತಎಣಿಕಾ ಕೇಂದ್ರಕ್ಕೆ ಆಗಮಿಸಿದ್ದು, ಮತಎಣಿಕೆಯ ಸಿದ್ಧತೆಯಲ್ಲಿದ್ದಾರೆ. ಸರಿಯಾಗಿ 7 ಗಂಟೆ 30 ನಿಮೀಷಕ್ಕೆ ಸ್ಟ್ರಾಂಗ್ ರೂಮ್ ತೆರೆಯಲಾಗುತ್ತದೆ. ಅದಾದ ನಂತರ 7 ಗಂಟೆ 45 ನಿಮಿಷಕ್ಕೆ ಅಂಚೆ ಮತ್ತು ಸೇವಾ ಮತ ಎಣಿಕೆ ನಡೆಸಲಾಗುತ್ತೆ.
8 ಗಂಟೆಯಿಂದ ಮತಯಂತ್ರಗಳ ಮತ ಎಣಿಕೆ ಆರಂಭವಾಗಲಿದೆ. ಸುಮಾರು 19 ಸುತ್ತುಗಳ ಎಣಿಕೆಯ ನಂತರ ಸ್ವಷ್ಟ ಫಲಿತಾಂಶ ಹೊರಬೀಳಲಿದೆ. ಅಂಚೆ ಮತ್ತು ಸೇವಾ ಮತ ಎಣಿಕೆಗೆ ಪ್ರತ್ಯೇಕ ಕೊಠಡಿ ಸಿದ್ಧಪಡಿಸಲಾಗಿದೆ.
ಬಿಜೆಪಿಯಿಂದ ಅಭ್ಯರ್ಥಿಯಾಗಿ ಶಿವರಾಜ್ ಸಜ್ಜನರ್, ಕಾಂಗ್ರೆಸ್ನ ಶ್ರೀನಿವಾಸ ಮಾನೆ, ಜೆಡಿಎಸ್‌ನಿಂದ ನಿಯಾಜ್ ಶೇಖ್ ಸೇರಿದಂತೆ ಒಟ್ಟು13 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮಧ್ಯಾಹ್ನದ ವೇಳೆಗೆ ಫಲಿತಾಂಶದ ಸಂಪೂರ್ಣ ಚಿತ್ರಣ ಲಭ್ಯವಾಗಲಿದೆ.