ಹಾವೇರಿ: ಹಾನಗಲ್ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಭರ್ಜರಿ ಗೆಲುವು ಸಾಧಿಸಿದ್ದಾರೆ.
ತೀವ್ರ ಜಿದ್ದಾಜಿದ್ಧಿನಿಂದ ಕೂಡಿದ್ದ ಹಾನಗಲ್ ಉಪಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ತವರೂರಿನಲ್ಲಿಯೇ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನ್ ಸೋಲನುಭವಿಸಿದ್ದಾರೆ. ಮತ ಎಣಿಕೆಯ ಮೊದಲ ಸುತ್ತಿನಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್ ನ ಶ್ರೀನಿವಾಸ್ ಮನೆ ಭರ್ಜರಿ ಗೆಲುವು ಸಾಧಿಸಿದ್ದಾರೆ.
14ನೇ ಸುತ್ತಿನ ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ ಶ್ರೀನಿವಾಸ್ ಮಾನೆ 64,489 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನ್ 57,682 ಮತಗಳನ್ನು
ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ್ 714 ಮತಗಳನ್ನು ಪಡೆದಿದ್ದಾರೆ.
ಒಟ್ಟಾರೆ ಉಪಚುನಾವಣೆಯಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಬೇವು-ಬೆಲ್ಲ ಸಿಕ್ಕಂತಾಗಿದ್ದು ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದರೆ, ಹಾನಗಲ್ ನಲ್ಲಿ ತೀವ್ರ ಮುಖಭಂಗ ಅನುಭವಿಸಿದೆ.
Laxmi News 24×7