Breaking News

ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಭರ್ಜರಿ ಗೆಲುವು

Spread the love

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ಉಪಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಸಿಂದಗಿ ಉಪಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ನಿರೀಕ್ಷೆಯಂತೆ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಭಾರಿ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.

ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು 74,463 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮುನಗೂಳಿ 49,897 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ 3116 ಮತಗಳನ್ನು ಪಡೆದಿದ್ದಾರೆ.

ರಮೇಶ್ ಭೂಸನೂರು ಗೆಲುವು ಸಾಧಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು, ನಾಯಕರು ಸಿಹಿ ಹಂಚಿ, ಬಣ್ಣ ಹಚ್ಚಿ ಜಯಯಕಾರ ಹಾಕುವ ಮೂಲಕ ಸಂಭ್ರಮಚರಣೆಯಲ್ಲಿ ತೊಡಗಿದ್ದಾರೆ.


Spread the love

About Laxminews 24x7

Check Also

ಹಾಸನಾಂಬೆಯ ದಾಖಲೆಯ ದರ್ಶನ: ಒಂದೇ ದಿನ 3.10 ಲಕ್ಷ ಭಕ್ತರ ಆಗಮನ

Spread the loveಹಾಸನ: ಈ ವರ್ಷ ಹಾಸನಾಂಬೆ ದೇವಾಲಯಕ್ಕೆ ಒಂದು ವಾರದಲ್ಲಿ 13.89 ಲಕ್ಷ ಭಕ್ತರು ಹರಿದುಬಂದಿದ್ದು, ಶುಕ್ರವಾರ ಒಂದೇ ದಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ