Breaking News

ಎರಡೂ ಕಡೆ ಠೇವಣಿ ಕಳೆದುಕೊಂಡ ಜೆಡಿಎಸ್‍

Spread the love

ಬೆಂಗಳೂರು, ನ.2- ಸಿಂಧಗಿ, ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿದ್ದ ಜೆಡಿಎಸ್‍ಗೆ ಫಲಿತಾಂಶ ಭಾರೀ ನಿರಾಸೆಯನ್ನುಂಟುಮಾಡಿದೆ. ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಪರಾಜಿತರಾಗಿದ್ದು, ಭಾರೀ ಹಿನ್ನಡೆ ಅನುಭವಿಸಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ, ನಿರೀಕ್ಷಿತ ಮತಗಳು ಜೆಡಿಎಸ್‍ಗೆ ಲಭಿಸಿಲ್ಲ. ಹೀಗಾಗಿ ಜೆಡಿಎಸ್ ನಾಯಕರಿಗೆ ಭಾರೀ ನಿರಾಸೆಯಾಗಿದೆ.

ಹಾನಗಲ್ ಕ್ಷೇತ್ರದಲ್ಲಿ ನಿಯಾಜ್ ಶೇಖ್ ಜೆಡಿಎಸ್ ಅಭ್ಯರ್ಥಿಯಾಗಿ ಸ್ರ್ಪಸಿದ್ದರು. ಸಿಂಧಗಿ ಕ್ಷೇತ್ರದಲ್ಲಿ ಅಂಗಡಿ ನಾಜಿಯಾ ಜೆಡಿಎಸ್‍ನಿಂದ ಕಣಕ್ಕಿಳಿದಿದ್ದರು. ಹಾನಗಲ್‍ಗಿಂತ ಹೆಚ್ಚಾಗಿ ಸಿಂಧಗಿಯಲ್ಲಿ ಹೆಚ್ಚಿನ ಶ್ರಮ ವಹಿಸಿ ಪ್ರಚಾರ ಮಾಡಲಾಗಿತ್ತು. ಜೆಡಿಎಸ್ ಅನುಸರಿಸಿದ ಚುನಾವಣಾ ತಂತ್ರ ನಿರೀಕ್ಷಿತ ಫಲ ನೀಡಲಿಲ್ಲ. ಎರಡೂ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಜೆಡಿಎಸ್ ಬಿಜೆಪಿಗೆ ಅನುಕೂಲ ಮಾಡಿಕೊಟ್ಟಿದೆ ಎಂಬ ಕಾಂಗ್ರೆಸ್ ಆರೋಪವನ್ನು ಜೆಡಿಎಸ್ ನಾಯಕರು ಅಲ್ಲಗಳೆದರು.


Spread the love

About Laxminews 24x7

Check Also

ಮಾಜಿ ಸಚಿವ ಶ್ರೀಮಂತ ಪಾಟೀಲ್ ಇವರ ಜನ್ಮದಿನ ನಿಮಿತ್ಯ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ 4000 ಜನ ಉಚ್ಚಾರಿಸಿಕೊಂಡರು.

Spread the love ಮಾಜಿ ಸಚಿವ ಶ್ರೀಮಂತ ಪಾಟೀಲ್ ಇವರ ಜನ್ಮದಿನ ನಿಮಿತ್ಯ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ