Breaking News
Home / ರಾಜಕೀಯ / ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ : ಚೆಲುವರಾಯಸ್ವಾಮಿ

ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ : ಚೆಲುವರಾಯಸ್ವಾಮಿ

Spread the love

ಬೆಂಗಳೂರು, ನ.2- ನಿಜವಾದ ಹೋರಾಟ ನಡೆದಿದ್ದು, ಹಾನಗಲ್‍ನಲ್ಲಿ. ಸ್ವತಃ ಮುಖ್ಯಮಂತ್ರಿಗಳೇ ಪ್ರಚಾರಕ್ಕೆ ಇಳಿದು ತಮ್ಮೆಲ್ಲಾ ಬಲವನ್ನು ಪ್ರಯೋಗಿಸಿದರೂ ಮತದಾರ ಪ್ರಭು ಕಾಂಗ್ರೆಸ್ ಕೈ ಹಿಡಿದಿರುವುದು ಮುಂದಿನ 2023 ವಿಧಾನಸಭಾ ಚುನಾವಣೆಯ ದಿಕ್ಸೂಚಿ ಎಂದು ಮಾಜಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ.

 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ಮಂತ್ರಿಮಂಡಲವೇ ಹಾನಗಲ್‍ನಲ್ಲಿ ಪ್ರಚಾರ ನಡೆಸಿತು. ಇದಲ್ಲದೆ ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ತವರು ಜಿಲ್ಲೆಯಲ್ಲಿ ಬರುವ ಈ ಕ್ಷೇತ್ರವನ್ನು ಗೆಲ್ಲಲು ನಾನಾ ತಂತ್ರಗಾರಿಕೆಗಳನ್ನು ಮಾಡಿದರು. ಆದರೆ ಅವರು ವಿಫಲರಾಗಿದ್ದಾರೆ ಎಂದು ಟೀಕಿಸಿದ್ದಾರೆ.

ಪ್ರತಿ ಬಾರಿ ಆಡಳಿತ ಪಕ್ಷದ ಪರವಾಗಿ ಉಪ ಚುನಾವಣೆಗಳಲ್ಲಿ ಫಲಿತಾಂಶ ಬರುತ್ತದೆ. ಆದರೆ ಈ ಬಾರಿ ಜನತೆ ಬದಲಾವಣೆ ಬಯಸಿದ್ದಾರೆ. ದುರಾಡಳಿತ ಹಾಗೂ ಜನರ ಕಷ್ಟಕ್ಕೆ ಸ್ಪಂದಿಸದ ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಹೊಸ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಈಗಲಾದರೂ ಅರ್ಥವಾಗಿರಬಹುದು. ಜನರ ಭಾವನೆಗಳನ್ನು ಕೆರಳಿಸಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ. ಅಭಿವೃದ್ಧಿ ಮತ್ತು ನಂಬಿಕೆಯ ರಾಜಕಾರಣವೇ ಮುಖ್ಯ. ಅದನ್ನು ಹಾನಗಲ್ ಮಹಾ ಜನತೆ ಒಪ್ಪಿ ನಮ್ಮನ್ನು ಆಶೀರ್ವದಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕ ನಾಯಕರು ಈ ಉಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದರೆ ಹಾನಗಲ್‍ನಲ್ಲಿ ಇನ್ನು ಹೆಚ್ಚಿನ ಅಂತರದಲ್ಲಿ ಗೆಲ್ಲಬೇಕಾಗಿತ್ತು. ಸಿಂಧಗಿಯಲ್ಲಿ ನಮಗೆ ಹಿನ್ನಡೆಯಾಗಿದೆ. ಎಲ್ಲಿ ತಪ್ಪಾಗಿದೆ ನೋಡಿಕೊಂಡು ಮುಂದಿನ ಚುನಾವಣೆಗೆ ಕಾಂಗ್ರೆಸ್ ಸಜ್ಜಾಗುತ್ತಿದೆ. ಸಿಎಂ ತವರು ಕ್ಷೇತ್ರದಲ್ಲೇ ಬಿಜೆಪಿ ಸೋತಿರುವುದು ಬಿಜೆಪಿಗೆ ಮುಖಭಂಗವಾಗಿದೆ ಎಂದು ಅವರು ಹೇಳಿದ್ದಾರೆ.


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ