Breaking News
Home / ರಾಜಕೀಯ / ಉಪ ಚುನಾವಣೆಯಲ್ಲಿ ಜೆಡಿಎಸ್ ಸೋಲಿನ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದೇನು ಗೊತ್ತಾ.?

ಉಪ ಚುನಾವಣೆಯಲ್ಲಿ ಜೆಡಿಎಸ್ ಸೋಲಿನ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದೇನು ಗೊತ್ತಾ.?

Spread the love

ನವದೆಹಲಿ: ಇಂದು ಪ್ರಕಟಗೊಂಡಿರುವಂತ ಹಾನಗಲ್ ಹಾಗೂ ಸಿಂದಗಿ ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಹೀನಾಯ ಸೋಲು ಕಂಡಿದ್ದಾರೆ. ಇದಕ್ಕೆ ಮಾಡಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಏನ್ ಹೇಳಿದ್ರು ಅಂತ ಮುಂದೆ ಓದಿ.

ನವದಹೆಲಿಯಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತನಾಡಿದಂತ ಅವರು, ಇದುವರೆಗೂ ನಾನು ಉಪಚುನಾವಣೆ ಪ್ರಚಾರ ಮಾಡಿರಲಿಲ್ಲ ಆದರೆ ಸಿಂದಗಿ ಉಪಚುನಾವಣೆ ಹೋಗಿದ್ದೆ. ಸಿಂದಗಿ ಜನರು ಕಷ್ಟದಲ್ಲಿದ್ದರು, ಕೂಲಿಗೆ ಮಹಾರಾಷ್ಟ್ರಕ್ಕೆ ಗುಳೆ ಹೋಗುತ್ತಿದ್ದರು ಆ ಭಾಗದ ಜನರಿಗೆ ಏನ್ ಮಾಡಿದ್ದೇನೆ ಅನ್ನೊದನ್ನು ಜನರೇ ಹೇಳುತ್ತಾರೆ ಮನಗೊಳಿಯವರು ಸಮಾಜವಾದಿ ಜನತಾ ಪಾರ್ಟಿಯಿಂದ ನಿಂತು ಸೋತರು. ಮತ್ತೆ ನಮ್ಮ ಪಕ್ಷಕ್ಕೆ ಬಂದು ಗೆದ್ದರು ಅವರನ್ನು 2 ಬಾರಿ ಮಂತ್ರಿ ಕೂಡ ಮಾಡಿದ್ದೆವು. ಆದರೆ ಈಗ ಅವರ ಮಗ ಕಾಂಗ್ರೆಸ್ ಗೆ ಹೋಗಿದ್ದನ್ನು ನಾನು ಚರ್ಚೆ ಮಾಡಲ್ಲ ಅಲ್ಲಿನ ಜನತೆ ಮನಗೊಳಿ ಹಾಗೂ ನನ್ನ ಪ್ರತಿಮೆ ಮಾಡಿದ್ದಾರೆ ಆ ಕಾರ್ಯಕ್ರಮಕ್ಕೆ ನಾನು ಹೋಗಿದ್ದೆ. ಈ ಬಾರಿಯ ಉಪಚುನಾವಣೆಯಲ್ಲಿ ಮುಸ್ಲಿಂ ಅಭ್ಯರ್ಥಿ ಆಯ್ಕೆ ಮಾಡಿದ್ದೆವು ಸಿಂದಗಿಯಲ್ಲಿ ಅಂಗಡಿ ಪ್ಯಾಮಿಲಿಗೆ ಒಳ್ಳೆಯ ಹೆಸರಿದೆ ಸಿಂದಗಿಯಲ್ಲಿ ಹಿಂದು ಮುಸ್ಲಿಂ ಎಂಬ ಬೇದ ಇಲ್ಲ. ಹಾಗಾಗಿ ನಾವು ಅಂಗಡಿ ಫ್ಯಾಮಿಲಿಗೆ ಟಿಕೆಟ್ ಕೊಟ್ಟೆವು ಎಂಬುದಾಗಿ ತಿಳಿಸಿದ್ದಾರೆ.

ಕಾಂಗ್ರೆಸ್ ನವರು ಚೆನ್ನಾಗಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಗಿಂತ ಹೆಚ್ಚು ಹಣವನ್ನು ಬಿಜೆಪಿ ಖರ್ಚು ಮಾಡಿದೆ. ಒಟಿಗೆ 10ಸಾವಿರ ಕೊಟ್ಟಿದ್ದಾರೆ ಅಂತಾ ಚರ್ಚೆ ಇದೆ. ಕಾಂಗ್ರೆಸ್ ನವರು ಚನ್ನಾಗಿ ಖರ್ಚು ಮಾಡಿದ್ದಾರೆ ಅಂತ ಹೇಳ್ತಾರೆ ನಮ್ಮವರು ಎಷ್ಟು ತಗೊಂಡಿದ್ದಾರೆ ಎಂದು ನಾನು ಕೇಳಿಲ್ಲ ಮೂರನೆ ಸ್ಥಾನಕ್ಕೆ ಹೋಗಿದ್ದಾರೆ ಅನ್ನಿಸುತ್ತೆ. ನಾನ್ಯಾಕೆ ಸಿಂದಗಿ ಪ್ರಚಾರಕ್ಕೆ ಹೋದೆ ಅಂದ್ರೆ, ಸಿಂದಗಿಯಲ್ಲಿ ಹಸಿರು ತುಂಬಿದೆ, ಅಭಿವೃದ್ಧಿಯಾಗಿದೆ. ಇದಕ್ಕೆ‌ ಯಾರು ಕಾರಣ ? ಈ ಉಪಚುನಾವಣೆ ಫಲಿತಾಂಶದಿಂದ ದೃತಿಗೆಟ್ಟಿಲ್ಲ ಇನ್ನು ಒಂದುವರೆ ವರ್ಷ ಹೋರಾಡುತ್ತೇನೆ ವಿಜಾಪುರ,ಬಾಗಲಕೋಟೆ ಪ್ರದೇಶದಲ್ಲಿ 20 ಸಕ್ಕರೆ ಕಾರ್ಖಾನೆ ಕೊಟ್ಟಿದ್ದೇನೆ ಅಂತ ಹೇಳಿದ್ರು.

ಉಪಚುನಾವಣೆಯಲ್ಲಿ ಹೆಚ್ಚು ಖರ್ಚು ಮಾಡಿದ್ದಾರೆ. ಆದರೆ ಸಾರ್ವರ್ತಿಕ ಚುನಾವಣೆಯಲ್ಲಿ ಇಷ್ಟು ಹಣ ಸುರಿಯೋಕೆ‌ ಆಗಲ್ಲ ! ಮುಂದಿನ ಚುನಾವಣೆಗೆ ನಾನು ಪ್ರವಾಸ ಮಾಡುತ್ತೇನೆ ಇದೇ ಭಾಗದಲ್ಲಿ ಹೆಚ್ಚು ಪ್ರವಾಸ ಮಾಡುತ್ತೇನೆ ಒಂದು ತಿಂಗಳಲ್ಲಿ ಎರಡು ಜಿಲ್ಲೆಗೆ ಭೇಟಿ ನೀಡುತ್ತೇನೆ ಬಳಿಕ ನಾನೇ ಅಭ್ಯರ್ಥಿ ಆಯ್ಕೆ ಮಾಡುತ್ತೇನೆ. ದಕ್ಷಿಣದಲ್ಲಿ ಕುಮಾರಸ್ವಾಮಿ ನೋಡಿಕೊಳ್ತಾರೆ ಪಕ್ಷದ ಎಲ್ಲ ಮುಖಂಡರ ಜೊತೆ ಸೇರಿ ಒಟ್ಟಾಗಿ ಹೋರಾಡುತ್ತೇವೆ ದೃತಿಗೆಡುವುದಿಲ್ಲ ಎಂದರು.

ನಮ್ಮ ಪಕ್ಷದ ಅಭ್ಯರ್ಥಿ ತೆಗೆದುಕೊಂಡು ಹೋಗಿ ಕಾಂಗ್ರೆಸ್ ಪಡೆದ ಮತ ಎಷ್ಟು..? ಹಾನಗಲ್ ಬಗ್ಗೆ ನಾನು ಮಾತನಾಡುವುದಿಲ್ಲ.. ಬರೀ ಕಾಂಗ್ರೆಸ್ ,ಬಿಜೆಪಿ ಆದ್ರೆ ನಾವೇನು ಮನೆಗೆ ಹೋಗಬೇಕಾ..? ದೇವೆಗೌಡ ಇನ್ನು ಜೀವಂತ ಬದುಕಿದ್ದಾನೆ. 89 ವರ್ಷ ಆಗಿದ್ರು ಹೋರಾಟ ಮಾಡುತ್ತೇನೆ. ನಮ್ಮ ಪಕ್ಷದಲ್ಲಿ ನಾಯಕರಿದ್ದಾರೆ, ಹೋರಾಡುತ್ತೇವೆ. ನನ್ನ ಚುನಾವಣೆ ಸೋತ ಮೇಲೆ ಗುಬ್ಬಿ ಶ್ರೀನಿವಾಸ್ ನೇತೃತ್ವದಲ್ಲೇ ಜಿಲ್ಲಾ ಪ್ರವಾಸ ಮಾಡೋಣ ಎಂದಿದ್ದೆ. ಮಂತ್ರಿ ಆಗಿದ್ದಾಗಲೇ ಕೇಳಿದ್ದೆ. ಜನರಿಗೆ ಧನ್ಯವಾದ ಹೇಳಲು ಮುಂದಾಗಿದ್ದೆ ಆದರೆ ಏನಾಯಿತು ಅಲ್ಲಿನ ಜನತೆ ಅರ್ಥ ಮಾಡಿಕೊಳ್ಳುತ್ತಾರೆ ಎಂದರು.

ಇನ್ನೂ ಗುಬ್ಬಿಯ ಜೆಡಿಎಸ್ ಶಾಸಕ ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಮಾತನಾಡಿದಂತ ಅವರು, ಗುಬ್ಬಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡಿದೆ. ಅವರು ಅಭ್ಯರ್ಥಿ ಘೋಷಣೆ ಮಾಡಿದ್ರೆ ನಾವು ಸುಮ್ಮನೆ ಕೂರಬೇಕಾ..? ನಾವು ಆಲ್ಟರ್ನೇಟಿವ್ ಹುಡುಕಬೇಕಾಗುತ್ತೆ.. ಜಿ.ಟಿ ದೇವೇಗೌಡ ಪಕ್ಷ ಬಿಟ್ಟಿದ್ದೇನೆ ಎಂದು ಹೇಳಿದ್ದಾರಾ.? ಮಕ್ಕಳು ಕೂತು ಮಾತನಾಡಿದ್ದಾರೆ. ಜಿಟಿಡಿ ಮಗ, ನಿಖಿಲ್ ಮಾತನಾಡಿದ್ದಾರೆ ಮುಂದೆ ಏನಾಗುತ್ತೆ ನೋಡೋಣ ಎಂದು ತಿಳಿಸಿದರು.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ