Breaking News

ಮಿಲಿಟರಿ ಆಸ್ಪತ್ರೆ ಬಳಿ ಸರಣಿ ಸ್ಫೋಟ ಸಂಭವಿಸಿದ್ದು, 19 ಜನರು ಮೃತ

Spread the love

ಕಾಬೂಲ್: ಅಪ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮಿಲಿಟರಿ ಆಸ್ಪತ್ರೆ ಬಳಿ ಸರಣಿ ಸ್ಫೋಟ ಸಂಭವಿಸಿದ್ದು, 19 ಜನರು ಮೃತಪಟ್ಟಿದ್ದು 50ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.

ಸ್ಫೋಟದ ಬೆನ್ನಲ್ಲೇ ಗುಂಡಿನ ದಾಳಿ ಕೂಡ ನಡೆದಿದೆ ಎಂದು ತಾಲಿಬಾನ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಪ್ಘಾನಿಸ್ತಾನದ ಅತಿದೊಡ್ಡ ಆಸ್ಪತ್ರೆ ಇದಾಗಿದ್ದು, 400 ಬೆಡ್ ಗಳ ವ್ಯವಸ್ಥೆಯಿರುವ ಸರ್ದಾರ್ ಮೊಹಮ್ಮದ್ ದೌದ್ ಖಾನ್ ಆಸ್ಪತ್ರೆಯ ಪ್ರವೇಶ ದ್ವಾರದ ಬಳಿ ಈ ಸ್ಫೋಟ ಸಂಭವಿಸಿದೆ. ಸ್ಫೋಟದ ಭೀಕರತೆಗೆ ಮಿಲಿಟರಿ ಆಸ್ಪತ್ರೆ ವೈದ್ಯರು, ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ 19 ಜನರು ಬಲಿಯಾಗಿದ್ದಾರೆ.

ಭಾರಿ ಸ್ಫೋಟದಿಂದಾಗಿ ಮಿಲಿಟರಿ ಆಸ್ಪತ್ರೆ ಸುತ್ತ ದಟ್ಟ ಹೊಗೆ ಆವರಿಸಿದ್ದು, ರಕ್ಷಣ ಕಾರ್ಯಾಚರಣೆಗೂ ಅಡ್ಡಿಯುಂಟಾಗಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ