Breaking News

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಈಗ ಮತ್ತೆ ಪೆಟ್ರೋಲ್ ಬೆಲೆಯನ್ನು ಏರಿಸಲು ಆರಂಭಿಸಿದೆ.

Spread the love

ಹೊಸದಿಲ್ಲಿ: ಜೂನ್ ಮತ್ತು ಜುಲೈ ತಿಂಗಳಲ್ಲಿ ನಿರಂತರವಾಗಿ ಇಂಧನ ಬೆಲೆ ಏರಿಸಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಈಗ ಮತ್ತೆ ಪೆಟ್ರೋಲ್ ಬೆಲೆಯನ್ನು ಏರಿಸಲು ಆರಂಭಿಸಿದೆ. ಆಗಸ್ಟ್ 16ರಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 14 ಪೈಸೆ ಹೆಚ್ಚಳ ಮಾಡಿತ್ತು. ಬಳಿಕ ಆಗಸ್ಟ್ 17ರಂದು 16 ಪೈಸೆ ಹೆಚ್ಚಿಸಿತ್ತು. ಈಗ ಆಗಸ್ಟ್ 18ರಿಂದ ಮತ್ತೆ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 17 ಪೈಸೆ ಹೆಚ್ಚಳ ಮಾಡಿದೆ. ಒಟ್ಟು ಮೂರು ದಿನಗಳಿಂದ 47 ಪೈಸೆ ಏರಿಸಿದೆ.

 

ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೂಡ್ ಆಯಿಲ್ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ, ಮಹಾ ಕ್ರೂರಿ ಕೊರೋನಾ ಮತ್ತು ಲಾಕ್​ಡೌನ್​ ಕಾರಣಗಳಿಂದ ಜನ ಸಾಮಾನ್ಯರು ಎಷ್ಟೇ ಕಷ್ಟದಲ್ಲಿದ್ದರೂ ಹಾಗೂ ಕಾಂಗ್ರೆಸ್ ನಾಯಕರು ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ವ್ಯಾಪಕವಾದ ವಿರೋಧ ವ್ಯಕ್ತಪಡಿಸುತ್ತಿದ್ದರೂ, ಇದ್ಯಾವುದನ್ನೂ ಪರಿಗಣಿಸದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆಯನ್ನು ಹೆಚ್ಚಳ ಮಾಡುತ್ತಿದೆ.

ಸಾಮಾನ್ಯವಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ, ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ.

ಬಹಳ‌ ಹಿಂದಿನಿಂದಲೂ ಇದು ನಡೆದುಕೊಂಡ ಬಂದಿರುವ ರೀತಿ. ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ‌ ಸತ್ಸಂಪ್ರದಾಯವನ್ನು ಮರೆತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ, ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರಂತರವಾಗಿ ಹೆಚ್ಚಳ ಮಾಡುತ್ತಲೇ ಇದೆ.

ಜೂನ್ ತಿಂಗಳಲ್ಲಿ ಬರೋಬ್ಬರಿ 23 ದಿನ‌ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಲಾಗಿತ್ತು. ನಂತರ ಜುಲೈ 7ರಂದು ಪ್ರತಿ ಲೀಟರ್ ಡೀಸೆಲ್ ಗೆ 25 ಪೈಸೆ, ಜುಲೈ 12ರಂದು 16 ಪೈಸೆ, ಜುಲೈ 13ರಂದು 11 ಪೈಸೆ, ಜುಲೈ 15ರಂದು 13 ಪೈಸೆ, ಜುಲೈ 17ರಂದು 17 ಪೈಸೆ, ಜುಲೈ 18ರಂದು ಮತ್ತೆ 17 ಪೈಸೆ, ಜುಲೈ 20ರಂದು 12 ಪೈಸೆ, ಜುಲೈ 26ರಂದು 15 ಪೈಸೆ ಹೆಚ್ಚಳ ಮಾಡಿತ್ತು.


Spread the love

About Laxminews 24x7

Check Also

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರದ ವಿರುದ್ಧ ಬಿಜೆಪಿ ಧರ್ಮ ಯುದ್ಧ ನಡೆಸುವುದಾಗಿ ಘೋಷಿಸಿದೆ.

Spread the love ಬೆಂಗಳೂರು: ಧರ್ಮಸ್ಥಳದ ವಿಚಾರವಾಗಿ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ “ಧರ್ಮದ ಉಳಿವಿಗಾಗಿ ಧರ್ಮ ಯುದ್ಧ” ಹೋರಾಟವನ್ನು ಮಾಡಲಿದ್ದೇವೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ