Breaking News

ನಾನೇ ಮಾಡಿದ್ದು ಎಂದು ಬೀಗುವಾಗ ಹತ್ತು ಬಾರಿ ಯೋಚಿಸಿ ಎಂದು ಬಿಜೆಪಿ ಟ್ವೀಟ್

Spread the love

ಬೆಂಗಳೂರು: ಸಿದ್ದರಾಮಯ್ಯನವರೇ, ತಾನೊಬ್ಬ ಅಹಿಂದ ನಾಯಕ ಎಂದು ಅಧಿಕಾರಕ್ಕೆ ಬಂದ ಮೇಲೆ ದಲಿತ ಸಮುದಾಯದ ಪರವಾಗಿ ಕೆಲಸ ಮಾಡುವುದು ನಿಮ್ಮ ಕರ್ತವ್ಯ. ಅದರಲ್ಲಿ ಹೆಚ್ಚುಗಾರಿಕೆ ಮೆರೆಯುವ ಅಗತ್ಯವಿಲ್ಲ. ನಾನೇ ಮಾಡಿದ್ದು ಎಂದು ಬೀಗುವಾಗ ಹತ್ತು ಬಾರಿ ಯೋಚಿಸಿ ಎಂದು ಬಿಜೆಪಿ ಟ್ವೀಟ್ ಮಾಡಿದೆ.

 

ದಲಿತ ವಿರೋಧಿ ಸಿದ್ದರಾಮಯ್ಯ ಹ್ಯಾಷ್ ಟ್ಯಾಗ್ ನಡಿ ಕರ್ನಾಟಕ ಬಿಜೆಪಿ ಸರಣಿ ಟ್ವೀಟ್ ಮಾಡಿದೆ.

ಮಾನ್ಯ ಸಿದ್ದರಾಮಯ್ಯನವರೇ, ಎಷ್ಟು ಬಾರಿ ಹಳೆ ಕತೆ ಹೇಳುತ್ತೀರಿ ಸ್ವಾಮಿ? ಜನ ಹೊಸದನ್ನು ಬಯಸುತ್ತಿದ್ದಾರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾನೇ ಮುಂದೆ ನಿಂತು ‘ದಲಿತರನ್ನು ಮುಖ್ಯಮಂತ್ರಿ’ ಮಾಡುತ್ತೇನೆ ಎಂದು ಹೇಳಿ ನೋಡೋಣ. ಆಗ ನಿಮ್ಮ ದಲಿತ ಪ್ರೇಮವನ್ನು ಒಪ್ಪಿಕೊಳ್ಳೋಣ. ಸಿದ್ದರಾಮಯ್ಯನವರಿಗೆ ದಲಿತರು ಎಂದರೆ ಕೇವಲ ಮತಬ್ಯಾಂಕ್. ಈ ಕಾರಣಕ್ಕಾಗಿಯೇ ನಮ್ಮ ಸರ್ಕಾರವಿದ್ದಾಗ ದಲಿತ ಸಮುದಾಯದ ಅಭಿವೃದ್ಧಿಗೆ ಹಣ ನೀಡಿದ್ದೇನೆ ಎಂದು ಹೇಳುತ್ತಾರೆ. ಅಂತರ್ಯದಲ್ಲಿ ದಲಿತ ನಾಯಕರನ್ನು ತುಳಿದು ಅಧಿಕಾರಕ್ಕೆ ಏರುತ್ತಾರೆ. ಸಿದ್ದರಾಮಯ್ಯ ಅವರದು ಬಣ್ಣದ ತಗಡಿನ ತುತ್ತೂರಿ ಎಂದು ಟೀಕಿಸಿದೆ.

ಸಿದ್ದರಾಮಯ್ಯನವರೇ, ದಲಿತ ಪರ ಕಾಳಜಿ ಮೆರೆದಿದ್ದೀರಲ್ಲವೇ? ಹಾಗಾದರೆ, ಕೊರಟಗೆರೆಯಲ್ಲಿ ದಲಿತ ನಾಯಕ ಡಾ.ಜಿ. ಪರಮೇಶ್ವರ್ ಅವರನ್ನು ಸೋಲಿಸಿದ್ದು‌ ಯಾರು? ಮುಖ್ಯಮಂತ್ರಿಯಾಗುವುದಕ್ಕೆ ಪರಮೇಶ್ವರ್‌ ಅವರು ಅಡ್ಡಿಯಾಗುತ್ತಾರೆ ಎನ್ನುವ ಕಾರಣಕ್ಕೆ ನೀವೇ ಸೋಲಿಸಿದ್ದಲ್ಲವೇ? ಸತ್ಯದರ್ಶನ ಮಾಡಿಸುವಿರಾ ಸಿದ್ದರಾಮಯ್ಯ ಎಂದು ಬಿಜೆಪಿ ಪ್ರಶ್ನಿಸಿದೆ.


Spread the love

About Laxminews 24x7

Check Also

ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ

Spread the loveಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ