ಹುಬ್ಬಳ್ಳಿ: ಕೇಂದ್ರ ಸರಕಾರ ಮಾದರಿಯಲ್ಲಿ, ರಾಜ್ಯ ಸರಕಾರದಿಂದಲೂ ಪೆಟ್ರೋಲ್ ಹಾಗೂ ಡೀಸಲ್ ಮೇಲೆ 7 ರೂ. ತೆರಿಗೆ ಇಳಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಗುರುವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರದ ನಿರ್ಧಾರ ಪ್ರಕಟಿಸುತ್ತಿದ್ದಂತೆಯೇ ನಾವು ಸಹ ತೈಲ ದರ ಇಳಿಕೆಗೆ ಕ್ರಮ ಕೈಗೊಂಡಿದ್ದೇವೆ.
ಈ ಕುರಿತು ಕೇಂದ್ರ ಗೃಹ ಹಾಗೂ ಹಣಕಾಸು ಸಚಿವರ ಜೊತೆ ಈಗಾಗಲೇ ಚರ್ಚೆ ಮಾಡಿದ್ದೇನೆ. ಎಲ್ಲ ರಾಜ್ಯಗಳು ಪೆಟ್ರೋಲ್ ಹಾಗೂ ಡೀಸೆಲ್ ದರ ಕಡಿಮೆ ಮಾಡಬೇಕೆಂದು ಬಯಸುತ್ತೇವೆ. ಕೇಂದ್ರ ಗೃಹ ಹಾಗೂ ಹಣಕಾಸು ಸಚಿವರು ಹೇಳಿದ್ದರು, ಈ ಹಿನ್ನೆಲೆಯಲ್ಲಿ ದರ ಇಳಿಕೆ ಮಾಡುವ ತೀರ್ಮಾನ ಮಾಡಿದ್ದೇವೆ. ಇದರಿಂದಾಗಿ ರಾಜ್ಯ ಸರಕಾರ ಬೊಕ್ಕಸಕ್ಕೆ ಸುಮಾರು 2100 ಕೋಟಿ ರೂ. ಕೊರತೆಯಾಗಲಿದೆ. ಆದಾಗ್ಯೂ ಡೀಸೆಲ್ ಹಾಗೂ ಪೆಟ್ರೋಲ್ ದರ ಇಳಿಕೆ ಮಾಡಿದ್ದೇವೆ ಎಂದರು.