Breaking News

ಹಿಮ್ಮುಖವಾಗಿ ಚಲಿಸಿದ ಟ್ರಾಕ್ಟರ್ ಚಕ್ರದಡಿ ಬಿದ್ದು ತಾಯಿ -ಮಗು ಸಾವು

Spread the love

ರಾಯಚೂರು: ಮನ್ಸಲಾಪುರ ರಸ್ತೆಯಲ್ಲಿನ ಶ್ರೀ ಲಕ್ಷ್ಮಿ ವೆಂಕಟೇಶ್ವರ ಜಿನ್ನಿಂಗ್ ಫ್ಯಾಕ್ಟರಿ ಬಳಿ ಟ್ರ್ಯಾಕ್ಟರ್ ​ಗೆ ಸಿಲುಕಿ ತಾಯಿ-ಮಗು ಮೃತಪಟ್ಟ ಧಾರುಣ ಘಟನೆ ನಡೆದಿದೆ.

ಮಹಾರಾಷ್ಟ್ರ ಮೂಲದ ಕಾರ್ಮಿಕ ಮಹಿಳೆ ವೈಶಾಲಿ (26 ವ), ಸಮರ್ಥ (3 ವ) ಮೃತರು.

ಹತ್ತಿ ತುಂಬಿದ್ದ ಟ್ರ್ಯಾಕ್ಟರ್ ಹಿಮ್ಮುಖವಾಗಿ ಚಲಿಸುವಾಗ ದುರ್ಘಟನೆ ಸಂಭವಿಸಿದೆ.

ಮಗು ಟ್ರ್ಯಾಕ್ಟರ್ ಗಾಲಿಗೆ ಸಿಲುಕುವ ಭಯದಿಂದ ರಕ್ಷಿಸಲು ಮುನ್ನುಗ್ಗಿದ್ದು, ತಾಯಿ ಕೂಡ ಮಗು ಸಮೇತ ಟ್ರ್ಯಾಕ್ಟರ್​ಗೆ ಸಿಲುಕಿದ್ದಾರೆ. ಸ್ಥಳಕ್ಕೆ ಸಂಚಾರಿ‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ದೇಹಗಳನ್ನ ರಿಮ್ಸ್ ಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಟ್ರ್ಯಾಕ್ಟರ್ ಚಾಲಕ ಮಂಗೇಶ್​ ನನ್ನು ವಶಕ್ಕೆ ಪಡೆದು ಟ್ರಾಕ್ಟರ್ ಜಪ್ತಿ ಮಾಡಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ