Breaking News

ಶಾಸಕರ ಪುತ್ರನ ಸಕ್ಕರೆ ಕಾರ್ಖಾನೆಯಲ್ಲಿ ದುರ್ಘಟನೆ; ಸೆಂಟ್ರಿಂಗ್ ಕುಸಿತಕ್ಕೆ ಬಲಿಯಾದವರ ಸಂಖ್ಯೆ ಮೂರಕ್ಕೆ ಏರಿಕೆ!

Spread the love

ದಾವಣಗೆರೆ: ಶಾಸಕ ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್.ಎಸ್​. ಗಣೇಶ್ ಮಾಲೀಕತ್ವದ ಸಕ್ಕರೆ ಕಾರ್ಖಾನೆಯಲ್ಲಿ ನಿರ್ಮಾಣ ಹಂತದಲ್ಲಿರುವ ಎಥನಾಲ್ ಘಟಕದ ಸೆಂಟ್ರಿಂಗ್ ಕುಸಿತದಿಂದ ಸತ್ತವರ ಸಂಖ್ಯೆ ಇದೀಗ ಮೂರಕ್ಕೆ ಏರಿದೆ.

ತಾಲೂಕಿನ ಕುಕ್ಕುವಾಡದ ದಾವಣಗೆರೆ ಸಕ್ಕರೆ ಕಾರ್ಖಾನೆಯ ಎಥೆನಾಲ್ ಘಟಕ ನಿರ್ಮಾಣದ ವೇಳೆ ಇಂದು ಮಧ್ಯಾಹ್ನ ಆರ್​ಸಿಸಿ ಕುಸಿದು ಬಿದ್ದು ಮೂವರು ಕಟ್ಟಡ ಕಾರ್ಮಿಕರು ಮೃತಪಟ್ಟಿದ್ದು, ಆರು ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ.

 

ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ಕುಮಾರಕಡೆ ಗ್ರಾಮ ವಾಸಿ ಬಸಪ್ಪ ( 32), ಮಾನಪ್ಪ (32) ಸ್ಥಳದಲ್ಲೇ ಮೃತರಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಪಶ್ಚಿಮ ಬಂಗಾಳದ ಮಜೀದ್ (28) ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆ ಉಸಿರೆಳೆದರು.

ಆರ್​ಸಿಸಿ ಕುಸಿಯುವ ಹಂತದಲ್ಲಿ ಕೆಲವರು ಹಾರಿ ಪ್ರಾಣ ಉಳಿಸಿಕೊಂಡರೆ ಒಬ್ಬ ಕಾರ್ಮಿಕ ಮೇಲಿನ ಸರಳು ಹಿಡಿದೇ ನಿಂತಿದ್ದರು. ಒಂದು ಬೃಹತ್ ಪಿಲ್ಲರ್ ಪೂರ್ಣ ಸಂಪರ್ಕ ಕಡಿದುಕೊಂಡು ಬಿದ್ದಿದೆ. ಘಟನೆಗೆ ಕಳಪೆ ಕಾಮಗಾರಿ ಕಾರಣ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಕ್ರೇನ್, ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದರು. ಹದಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


Spread the love

About Laxminews 24x7

Check Also

ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ

Spread the loveಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ