Breaking News

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 18,000 ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ

Spread the love

ಬೆಂಗಳೂರು : ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ವಿಶಾಲ್ ಆರ್ ಆದೇಶ ಹೊರಡಿಸಿದ್ದು, 2021-22 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ 18,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡಿದ್ದಾರೆ.

 

ವರ್ಗಾವಣೆ ಪ್ರಕ್ರಿಯೆ ಜಾರಿಯಲ್ಲಿರುವುದರಿಂದ ಖಾಲಿ ಹುದ್ದೆಗೆ ವರ್ಗಾವಣೆಗೊಂಡ ಶಿಕ್ಷಕರು ಕರ್ತವ್ಯಕ್ಕೆ ಹಾಜರಾದ ಕೂಡಲೇ ಅತಿಥಿ ಶಿಕ್ಷಕರನ್ನು ಸಂಬಂಧಪಟ್ಟ ಶಾಲೆಯಿಂದ ಬಿಡುಗಡೆ ಮಾಡಿ ತಾಲೂಕಿನ ಒಳಗೆ ಅಗತ್ಯ ಖಾಲಿ ಇರುವ ಶಾಲೆಯಲ್ಲಿ ಮುಂದುವರೆಸಲಯ ನಿಯಮಾನುಸಾರ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಮ ವಹಿಸಲು ಸೂಚನೆ ನೀಡಿದ್ದಾರೆ. ಹಲವು ಷರತ್ತಿನೊಂದಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡಿದ್ದಾರೆ.

              


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ