Home / ರಾಷ್ಟ್ರೀಯ / ಬಿಜೆಪಿ ಶಾಸಕ ಮಹೇಶ್ ನೇಗಿ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಆರೋಪ ಮಾಡಿದ್ದಾರೆ.

ಬಿಜೆಪಿ ಶಾಸಕ ಮಹೇಶ್ ನೇಗಿ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಆರೋಪ ಮಾಡಿದ್ದಾರೆ.

Spread the love

ಡೆಹ್ರಾಡೂನ್ : ಉತ್ತರಾಖಂಡದ ಬಿಜೆಪಿ ಶಾಸಕ ಮಹೇಶ್ ನೇಗಿ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಆರೋಪ ಮಾಡಿದ್ದಾರೆ.

ದ್ವಾರಹಾತ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ನೇಗಿ, 2016ರಿಂದ 2018ರ ಅವಧಿಯಲ್ಲಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ಆಪಾದಿಸಿದ್ದಾರೆ. ಪ್ರತಿಯಾಗಿ ಮಹಿಳೆಯ ಮೇಲೆ ಶಾಸಕರ ಪತ್ನಿ ಬ್ಲ್ಯಾಕ್‌ಮೇಲ್ ಆರೋಪ ಹೊರಿಸಿ ದೂರು ನೀಡಿದ್ದಾರೆ.

ತನ್ನ ಮಗುವಿಗೆ ಶಾಸಕ ನೇಗಿ ತಂದೆಯಾಗಿದ್ದು, ಸತ್ಯ ಪತ್ತೆಹಚ್ಚಲು ಡಿಎನ್‌ಎ ಪರೀಕ್ಷೆ ನಡೆಸಲಿ ಎಂದು ಮಹಿಳೆ ಸವಾಲು ಹಾಕಿದ್ದಾರೆ. ಮಸ್ಸೂರಿ, ನೈನಿತಾಲ್, ದೆಹಲಿ, ಹಿಮಾಚಲ ಪ್ರದೇಶ ಮತ್ತು ನೇಪಾಳಕ್ಕೆ ತನ್ನ ಜತೆ ಬಂದಿದ್ದ ಶಾಸಕ 2016ರಿಂದ 2018ರ ಅವಧಿಯಲ್ಲಿ ಅತ್ಯಾಚಾರ ಎಸಗಿದ್ದರು ಎಂದು ವಿವರ ನೀಡಿದ್ದಾರೆ.

ಈ ಮಧ್ಯೆ ಶಾಸಕರ ಪತ್ನಿ, ಮಹಿಳೆ ವಿರುದ್ಧ ದೂರು ನೀಡಿ ತನ್ನ ಪತಿಯನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದಾಳೆ ಎಂದು ಆಪಾದಿಸಿದ್ದಾರೆ. ಈ ಬಗ್ಗೆ ನೆಹರೂ ಕಾಲನಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.


Spread the love

About Laxminews 24x7

Check Also

ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಮಂಗಳವಾರ ರಾತ್ರಿ ಅದ್ಧೂರಿ ಚಾಲನೆ

Spread the love ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಮಂಗಳವಾರ ರಾತ್ರಿ ಅದ್ಧೂರಿ ಚಾಲನೆ ಸಿಕ್ಕಿದ್ದು, ನಗರ್ತಪೇಟೆಯಲ್ಲಿ ಧರ್ಮರಾಯಸ್ವಾಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ