Breaking News

ಅಣ್ಣ-ತಮ್ಮ ಸೇರಿ ಕೆಲಸ ಕೊಟ್ಟಿದ್ದಾತನ ಮಗನನ್ನೇ ಕೊಂದು ಮೂಟೆ ಕಟ್ಟಿದ್ದರು!;

Spread the love

ಬೆಂಗಳೂರು: ಎರಡು ದಿನಗಳ ಹಿಂದೆ ರಾಜಧಾನಿಯ ರಾಜರಾಜೇಶ್ವರಿ ನಗರದಲ್ಲಿ ಮೂಟೆಯಲ್ಲಿ ಕಂಡುಬಂದಿದ್ದ ವಿದ್ಯಾರ್ಥಿ ತರುಣ್‌ ಶವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ತರುಣ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿನಗರ ಪೊಲೀಸರು ನಾಸಿರ್‌ ಹಾಗೂ ಸೈಯದ್‌ ತಜ್ಮುಲ್‌ ಎಂಬವರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಬ್ಬರೂ ಸಹೋದರರು, ತರುಣ್‌ಗೆ ಗೆಳೆಯರಾಗಿದ್ದವರು.

ಭಾರತೀನಗರ ಮುರುಗಪಿಳ್ಳೈ ನಿವಾಸಿ ತರುಣ್‌ (20) ತಂದೆ ಮಣಿಯವರಿಂದ 2 ಸಾವಿರ ರೂಪಾಯಿ ಪಡೆದುಕೊಂಡು ಪಟಾಕಿ ತರುವುದಾಗಿ ಹೇಳಿ ನ. 1ರಂದು ಹೊರಹೋಗಿದ್ದ. ರಾತ್ರಿಯಾದರೂ ಮರಳದ್ದರಿಂದ ಬಳಿಕ ಭಾರತೀನಗರ ಪೊಲೀಸರಿಗೆ ದೂರು ನೀಡಲಾಗಿತ್ತು. ಮಂಗಳವಾರ ರಾಜರಾಜೇಶ್ವರಿ ನಗರ ರಾಜಾಕಾಲುವೆ ಬಳಿ ಕಂಡುಬಂದ ಮೂಟೆಯಲ್ಲಿ ಅಪರಿಚಿತ ಶವ ಇರುವುದು ತಿಳಿದುಬಂದಿತ್ತು. ಪೊಲೀಸರು ತನಿಖೆ ನಡೆಸಿದಾಗ ಅದು ತರುಣ್‌ ಶವ ಎಂಬುದು ದೃಢಪಟ್ಟಿತ್ತು.


Spread the love

About Laxminews 24x7

Check Also

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ