ಬೆಳಗಾವಿ : ಮುಜರಾಯಿ ಇಲಾಖೆಯ ‘ಎ’ ಮತ್ತು ‘ಬಿ’ ಗ್ರೇಡ್ ದೇವಸ್ಥಾನದಲ್ಲಿ ಮುಜರಾಯಿ ಇಲಾಖೆಯ ವತಿಯಿಂದ ಗೋಶಾಲೆಗಳನ್ನು ಆರಂಭಿಸುವ ಚಿಂತನೆ ನಡೆಸಲಾಗಿದೆ ಎಂದು ಮುಜರಾಯಿ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ( Shashikala Jolle ) ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವ, ರಾಜ್ಯದ 35 ಸಾವಿರಕ್ಕೂ ಅಧಿಕ ಅಧಿಸೂಚಿತ ದೇವಸ್ಥಾನಗಳಲ್ಲಿ ಗೋಪೂಜೆ ನಡೆಸಲಾಗುತ್ತಿದೆ. ಭಾರತ ಕೃಷಿ ಪ್ರಧಾನವಾದ ದೇಶವಾಗಿರುವುದರಿಂದ ಗೋರಕ್ಷಣೆ ಮಹತ್ವದ್ದಾಗಿದೆ. ಮುಜರಾಯಿ ಇಲಾಖೆಯ ‘ಎ’ ಮತ್ತು ‘ಬಿ’ ಗ್ರೇಡ್ ದೇವಸ್ಥಾನದಲ್ಲಿ ಮುಜರಾಯಿ ಇಲಾಖೆಯ ವತಿಯಿಂದ ಗೋಶಾಲೆಗಳನ್ನು ಆರಂಭಿಸುವ ಚಿಂತನೆ ನಡೆಸಲಾಗಿದೆ ಎಂದು ಮುಜರಾಯಿ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
250 ಕ್ಕೂ ಮೇಲ್ಪಟ್ಟ ದೇವಸ್ಥಾನಗಳಲ್ಲಿ ಮುಂಬರುವ ದಿನಗಳಲ್ಲಿ ಗೋಶಾಲೆಗೆ ಕ್ರಮ ತೆಗೆದುಕೊಳ್ಳಲಾಗುವುದು. ಜಿಲ್ಲಾವಾರು ‘ಎ’ ಮತ್ತು ‘ಬಿ’ ಗ್ರೇಡ್ ದೇವಸ್ಥಾನಗಳ ಪಟ್ಟಿ ಪಡೆದುಕೊಂಡು ಗೋಶಾಲೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುವುದು ಎಂದು ಶಶಿಕಲಾ ಜೊಲ್ಲೆ ಹೇಳಿದ್ದಾರೆ.