ದಾವಣಗೆರೆ: ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನ ಮಾಡಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ದಾವಣಗೆರೆ ಜಿಲ್ಲೆಯ ಬಿಜೆಪಿ ಶಾಸಕರಿಗೆ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ನೇರ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಅವರು ಜಿಲ್ಲೆಯ ಬಿಜೆಪಿ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.
ನಿಮಗೆ ಸಚಿವ ಸ್ಥಾನ ಬೇಕಾದರೆ ನೀವು ಸಚಿವರಾಗಿ. ಆದರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿ ಅವರನ್ನು ಬದಲಾಯಿಸಲು ನೋಡಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ. ಅವರನ್ನು ಉಸ್ತುವಾರಿಯಿಂದ ತೆಗೆಸಿದರೆ ಸರಿ ಇರಲ್ಲ. ನಾನು ದಾವಣಗೆರೆ ಜಿಲ್ಲೆಯ ಬಿಜೆಪಿ ಶಾಸಕರಿಗೆ ನೇರ ಎಚ್ಚರಿಕೆ ನೀಡುವೆ ಎಂದು ನಿರಂಜನಾನಂದ ಪುರಿ ಸ್ವಾಮೀಜಿ ಗುಡುಗಿದ್ದಾರೆ.