ಬಳ್ಳಾರಿ : ನವೆಂಬರ್ 18 ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಚುನಾವಣೆ ನಡೆಯಲಿದೆ ಎಂದು ಪ್ರಾದೇಶಿಕ ಆಯುಕ್ತರು ಘೋಷಿಸಿದ್ದಾರೆ.
ಕಳೆದ 6 ತಿಂಗಳಿಂದ ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್-ಉಪಮೇಯರ್ ಚುನಾವಣೆಯ ನಡೆದಿರಲಿಲ್ಲ.
ಸದ್ಯ ಇದೀಗ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ನವೆಂಬರ್ 18 ರಂದು ಮೇಯರ್-ಉಪಮೇಯರ್ ಚುನಾವಣೆ ನಡೆಯಲಿದೆ.
ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಒಟ್ಟು 39 ವಾರ್ಡ್ ಗಳ ಪೈಕಿ ಕಾಂಗ್ರೆಸ್ 21 ಸ್ಥಾನಗಳನ್ನು ಗೆದ್ದಿದ್ದು, ನಾಲ್ವರು ಪಕ್ಷೇತರ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಒಟ್ಟು 25 ಸಂಖ್ಯಾ ಬಲ ಹೊಂದಿರುವ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಸಿಕ್ಕಿದ್ದು, ಬಿಜೆಪಿ 13 ಸ್ಥಾನಗಳನ್ನು ಗೆದ್ದಿದೆ.