ಬೆಂಗಳೂರು : ಇತ್ತೀಚೆಗೆ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ನಾಳೆ ರಾಜ್ಯದ ಚಿತ್ರಮಂದಿರಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ರಾಜ್ಯಾದ್ಯಂತ 550 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ನಾಳೆ ಸಂಜೆ 6 ಗಂಟೆಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಚಿತ್ರ ಪ್ರದರ್ಶಕರರು ನಟ ಪುನೀತ್ ರಾಜ್ ಕುಮಾರ್ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಗೀತಾಂಜಲಿ, ಪುಷ್ಪಾಂಜಲಿ, ದೀಪಾಂಜಲಿ ಮೂಲಕ ನಮನ ಸಲ್ಲಿಸಲಾಗಿದೆ.ಚಿತ್ರ ಸಾಹಿತಿ ನಾಗೇಂದ್ರ ಪ್ರಸಾದ್ ರಚಿಸಿದ ಹಾಡಿನ ಮೂಲಕ ನಟ ಪುನೀತ್ ರಾಜ್ ಕುಮಾರ್ ಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ. ಪುನೀತ್ ರಾಜ್ ಕುಮಾರ್ ಭಾವಚಿತ್ರಕ್ಕೆ ಪುಷ್ಟನಮನ ಸಲ್ಲಿಸಿ, ಕ್ಯಾಂಡಲ್ ಗಳನ್ನು ಹಚ್ಚಿ, ಮೌನಾಚರಣೆ ಮೂಲಕ ನಮನ ಸಲ್ಲಿಸಲು ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.
Laxmi News 24×7