ನವದೆಹಲಿ: ಮಹಾರಾಷ್ಟ್ರದ ಅಹಮದ್‌ನಗರದಲ್ಲಿರುವ ಸಿವಿಲ್ ಆಸ್ಪತ್ರೆಯಲ್ಲಿ ಅಗ್ನಿ ಅವಗಢ ಸಂಭವಿಸಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ.
ಐಸಿಯು ವಾರ್ಡ್ನಲ್ಲಿ ಬೆಂಕಿ ಕಾಣಿಸಿಕೊಂಡು ದುರಂತ ಸಂಭವಿಸಿದೆ. ಇನ್ನು ಹಲವು ಮಂದಿ ಬೆಂಕಿಯ ಕೆನ್ನಾಲಿಗೆಗೆ ಗಂಭೀರವಾಗಿ ಗಾಯಗೊಂಡಿದ್ದು, ಸಾವು ನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
ಸುಟ್ಟು ಗಾಯಗೊಂಡಿರೋರಿಗೆ ಚಿಕಿತ್ಸೆ ಶುರುಮಾಡಲಾಗಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದೆ. ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.
Laxmi News 24×7