ಬೆಂಗಳೂರು : ಇತ್ತೀಚೆಗಷ್ಟೇ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಪದ್ಮ ಪ್ರಶಸ್ತಿ ನೀಡುವಂತೆ ಅಭಿಮಾನಿಗಳು ಒತ್ತಾಯಿಸಿದ್ದು, ರಾಜ್ಯ ಸರ್ಕಾರ ಪುನೀತ್ ಗೆ ಪದ್ಮ ಪ್ರಶಸ್ತಿ ನೀಡುವ ಕುರಿತಂತೆ ಅಗತ್ಯ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ.
ನಟ ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀ ಪ್ರಶಸ್ತಿ ನೀಡುವ ಕುರಿತು ನವೆಂಬರ್ 16ರ ಬಳಿಕ ಸರ್ಕಾರದ ಮಟ್ಟದಲ್ಲಿ ಹಾಗೂ ಪುನೀತ್ ಕುಟುಂಬದ ಜತೆ ಚರ್ಚಿಸಿ ಹೆಸರು ಶಿಫಾರಸು ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಅಭಿಮಾನಿಗಳು ಪುನೀತ್ ಅವರಿಗೆ ಪದ್ಮಶ್ರೀ ಪ್ರಶಸ್ತಿಗೆ ಒತ್ತಾಯಿಸಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳುವ ಸಾಧ್ಯತೆ ಇದ್ದು, ಪದ್ಮಶ್ರೀ ಪ್ರಶಸ್ತಿಗೆ ಪುನೀತ್ ಹೆಸರು ಶಿಫಾರಸು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.