Breaking News

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುತ್ತಿರುವ ಬಿಜೆಪಿಯ ಧೋರಣೆ ಖಂಡಿಸಿ ಮೈಸೂರು ನಗರ ಮತ್ತು ಜಿಲ್ಲಾ ಕಾಂಗ್ರೆಸ್‌ ನಗರದಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ

Spread the love

ಮೈಸೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುತ್ತಿರುವ ಬಿಜೆಪಿಯ ಧೋರಣೆ ಖಂಡಿಸಿ ಮೈಸೂರು ನಗರ ಮತ್ತು ಜಿಲ್ಲಾ ಕಾಂಗ್ರೆಸ್‌ ನಗರದಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಸಿತು.

ಪುರಭವನ ಮುಂಭಾಗದ ಅಂಬೇಡ್ಕರ್‌ ಪ್ರತಿಮೆ ಬಳಿ ನೆರೆದ ಪ್ರತಿಭಟನಕಾರರು ಬಿಜೆಪಿಯ ಕುತಂತ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

 

‘ದಲಿತ ಮುಖಂಡರು ಸ್ವಾರ್ಥಕ್ಕಾಗಿ ಬಿಜೆಪಿ ಸೇರಿದ್ದಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ತಿರುಚಿ ದಲಿತರಿಗೆ ಅಗೌರವ ತೋರಿದ್ದಾರೆ ಎಂದು ಬಿಂಬಿಸಲಾಗುತ್ತಿದೆ. ದಲಿತರ ನಡುವೆ ಒಡಕು ಮೂಡಿಸುವ ಹುನ್ನಾರ ಇದರ ಹಿಂದೆ ಇದೆ’ ಎಂದು ಪ್ರತಿಭಟನಕಾರರು ದೂರಿದರು.

‘ಸಿದ್ದರಾಮಯ್ಯ ಅವರಿಗೆ ದಲಿತರ ಬಗ್ಗೆ ಅಪಾರ ಗೌರವ ಇದೆ. ಅವರ ಏಳಿಗೆಗಾಗಿ ಸಾಕಷ್ಟು ಯೋಜನೆಗಳನ್ನೂ ಜಾರಿಗೆ ತಂದಿದ್ದಾರೆ. ಸುಳ್ಳು ಆರೋಪಗಳನ್ನು ಮಾಡುವುದನ್ನು ಬಿಡಬೇಕು’ ಎಂದು ಒತ್ತಾಯಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌.ಧ್ರುವನಾರಾಯಣ, ಮುಖಂಡರಾದ ಕಳಲೆ ಕೇಶವಮೂರ್ತಿ, ಎಂ.ಕೆ.ಸೋಮಶೇಖರ್‌, ವಾಸು, ಮಂಜುಳಾ ಮಾನಸ, ಕಾಂಗ್ರೆಸ್‌ ನಗರ ಘಟಕದ ಅಧ್ಯಕ್ಷ ಆರ್‌.ಮೂರ್ತಿ, ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್‌ ಪಾಲ್ಗೊಂಡಿದ್ದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ