Breaking News

ಹಲವು ಜಿಲ್ಲೆಗಳಲ್ಲಿ ನ.7ರಿಂದ 9ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ

Spread the love

ಬೆಂಗಳೂರು : ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ನ.7ರಿಂದ 9ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳವರೆಗೆ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನ.7ರಂದು ಹೆಚ್ಚು ಮಳೆಯಾಗಬಹುದು. ಉತ್ತರ ಒಳನಾಡಿನಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಇದೇ 9ರಿಂದ ರಾಜ್ಯದಾದ್ಯಂತ ಮಳೆ ತಗ್ಗುವ ನಿರೀಕ್ಷೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಮಳೆ-ಎಲ್ಲಿ, ಎಷ್ಟು?: ಉಡುಪಿಯಲ್ಲಿ ಶನಿವಾರ 9 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಚನ್ನಪಟ್ಟಣ 7, ಮಧುಗಿರಿ 6, ಮಂಗಳೂರು, ಕಾರ್ಕಳ, ಅಜ್ಜಂಪುರ, ಮದ್ದೂರು 5, ಕುಂದಾಪುರ, ಬಂಟ್ವಾಳ, ಪುತ್ತೂರು, ಕೋಲಾರ, ಶ್ರೀನಿವಾಸಪುರ 4, ಧಾರವಾಡ, ಪಾಂಡವಪುರ, ಚಿಂತಾಮಣಿ, ಗೌರಿಬಿದನೂರು 3, ಮೂಡುಬಿದಿರೆ, ಭಟ್ಕಳ, ಹಾಸನ, ಬಂಗಾರಪೇಟೆ, ಶಿಕಾರಿಪುರ, ಚಿಕ್ಕಬಳ್ಳಾಪುರ, ಹಗರಿಬೊಮ್ಮನಹಳ್ಳಿ 2, ಅರಕಲಗೂಡು, ಅರಸೀಕೆರೆ, ಬಾಗೇಪಲ್ಲಿ, ತೊಂಡೆಬಾವಿ, ಭದ್ರಾವತಿ, ಪಾವಗಡ, ಕೊಪ್ಪ, ದೊಡ್ಡಬಳ್ಳಾಪುರ, ಶ್ರೀರಂಗಪಟ್ಟಣದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ