Breaking News

ಡಿಮ್ಹಾನ್ಸ್‌ ಆಸ್ಪತ್ರೆಗೆ ಸೌಕರ್ಯ ಕಲ್ಪಿಸದ ಸರ್ಕಾರ: ಸಂಬಂಧಿಸಿದ ಅಧಿಕಾರಿಯನ್ನು ಜೈಲಿಗೆ ಕಳಿಸ್ತೇವೆ ಎಂದು ಗುಡುಗಿದ ಹೈಕೋರ್ಟ್

Spread the love

ಧಾರವಾಡ: ಧಾರವಾಡದ ಡಿಮ್ಹಾನ್ಸ್‌ ಆಸ್ಪತ್ರೆಗೆ ಮೂಲಸೌಕರ್ಯ ಕಲ್ಪಿಸದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ ಸಂಬಂಧಿಸಿದ ಅಧಿಕಾರಿಯನ್ನು ಜೈಲಿಗೆ ಕಳಿಸ್ತೇವೆ ಎಂದು ಗುಡುಗಿದೆ. ಧಾರವಾಡದ ಡಿಮ್ಹಾನ್ಸ್‌ ಆಸ್ಪತ್ರೆಗೆ ಸರ್ಕಾರ ಮೂಲಸೌಕರ್ಯ ಕಲ್ಪಿಸಿಲ್ಲ. ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರೂ ಅಧಿಕಾರಿಗಳು ಗೈರು ಹಾಜರಾಗಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಗೈರು ಹಾಜರಾಗಿದ್ದಾರೆ. ಕ್ಯಾಬಿನೆಟ್ ಮೀಟಿಂಗ್‌ಗೆ ಹಾಜರಾಗಲು ತೆರಳಿರುವುದಾಗಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ತರಾಟೆಗೆ ತೆಗೆದುಕೊಂಡಿದೆ.

ಅಧಿಕಾರಿ ಹಾಜರಾಗದಿರುವುದಕ್ಕೆ ಹೈಕೋರ್ಟ್​ ಸಿಜೆ ರಿತುರಾಜ್ ಅವಸ್ತಿ ಗರಂ ಆಗಿದ್ದಾರೆ. ಕೋರ್ಟ್ ಆದೇಶಗಳನ್ನು ಅಧಿಕಾರಿಗಳು ಪಾಲಿಸುತ್ತಿಲ್ಲ. ಸಂಬಂಧಿಸಿದ ಅಧಿಕಾರಿಯನ್ನು ಜೈಲಿಗೆ ಕಳುಹಿಸುತ್ತೇವೆ. ಕೋರ್ಟ್‌ನ ಆದೇಶದ ಪ್ರಾಮುಖ್ಯತೆ ಅರ್ಥ ಮಾಡಿಸುತ್ತೇವೆ. ಡಿಮ್ಹಾನ್ಸ್‌ ಆಸ್ಪತ್ರೆಗೆ ಎಂಆರ್‌ಐ ಸಿಟಿ ಸ್ಕ್ಯಾನ್ ಯಂತ್ರ ಒದಗಿಸಿಲ್ಲ. ಮೆಡಿಕಲ್ ಸೂಪರಿಂಟೆಂಡೆಂಟ್ ನೇಮಕ ಮಾಡಿಲ್ಲ ಯಾಕೆ ಎಂದು ಆಕ್ರೋಶ ವ್ಯಕ್ತಪಡಿಸಿದ ನ್ಯಾಯಪೀಠವು ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಜರಿಗೆ ಸೂಚಿಸಿದೆ.


Spread the love

About Laxminews 24x7

Check Also

ತುರ್ತುಪರಿಸ್ಥಿತಿ ವೇಳೆ ಕಾಂಗ್ರೆಸ್‌ ವಿರೋಧಿಸಿದ್ದ ಸಿದ್ದರಾಮಯ್ಯರಿಂದ ಮಾಧ್ಯಮಗಳ ನಿರ್ಬಂಧ ಸರಿಯಲ್ಲ: ಅಶೋಕ್‌ ಆಕ್ಷೇಪ

Spread the loveಬೆಂಗಳೂರು: ಎಮರ್ಜೆನ್ಸಿ ಸಮಯದಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹಾಕಿದ್ದಾಗ, ಇದೇ ಸಿದ್ದರಾಮಯ್ಯ  ಅಂದಿನ ಕಾಂಗ್ರೆಸ್ ಸರ್ಕಾರವನ್ನ ವಿರೋಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ