Breaking News

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 1 ಕೋಟಿ ರೂ.ವರೆಗೆ ಬ್ಯಾಂಕ್ ಗಳಿಂದ ಸಾಲ ಸೌಲಭ್ಯ

Spread the love

 ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2021-22 ನೇ ಸಾಲಿನ ಆಯವ್ಯಯ ಘೋಷಣೆಯಂತೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಉದ್ಯಮಿಗಳಿಗೆ ಹಾಲಿ ಜಾರಿಯಲ್ಲಿರುವ ಶೇ.4 ರಷ್ಟು ಬಡ್ಡಿ ಸಹಾಯಧನ ಯೋಜನೆಯಡಿ ಸಾಲ ಸೌಲಭ್ಯ ಕಲ್ಪಿಸಲಾಗುವುದು.

ವಾಣಿಜ್ಯ ಮತ್ತು ವ್ಯಾಪಾರ ಚಟುವಟಿಕೆಗಳಾದ ಮಳಿಗೆ, ಡೀಲರ್ ಶಿಪ್, ಪ್ರಾಂಚೈಸಿ ಮತ್ತು ಹೋಟೆಲ್ ಉದ್ಯಮಗಳನ್ನು ಪ್ರಾರಂಭಿಸುವ ಸಲುವಾಗಿ ಈ ಯೋಜನೆಯಡಿ ಗರಿಷ್ಟ 1 ಕೋಟಿ ರೂ.

ವರೆಗೆ ರಾಷ್ಟ್ರೀಕೃತ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್‍ಗಳಿಂದ ಸಾಲ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಅದರಂತೆ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಉದ್ಯಮಿಗಳು ಸ್ಥಳೀಯ ರಾಷ್ಟ್ರೀಕೃತ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್‍ಗಳನ್ನು ಹಾಗೂ ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ಕಚೇರಿ ದೂ: 08272 225531 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.


Spread the love

About Laxminews 24x7

Check Also

ಪತಿಗೆ ಹೊಡೆದು ಶೌಚಾಲಯ ಗುಂಡಿಗೆ ಹಾಕಿದ್ದ ಪತ್ನಿ

Spread the loveಚಾಮರಾಜನಗರ: ಪ್ರಿಯಕರನ ಜೊತೆ ಸೇರಿ ತನ್ನ ಪತಿಗೆ ಹೊಡೆದು ಶೌಚಾಲಯ ಗುಂಡಿಗೆ ಹಾಕಿದ್ದ ಪತ್ನಿ ಹಾಗೂ ವ್ಯಕ್ತಿಗೆ ಅಪರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ