Breaking News
Home / ಜಿಲ್ಲೆ / ಬೆಂಗಳೂರು / ಸಿಇಟಿ ಪರೀಕ್ಷೆಯ ಫಲಿತಾಂಶ ಆ. 20ರಂದು ಪ್ರಕಟಆನ್​ಲೈನ್​ನಲ್ಲಿಯೇ ಕೌನ್ಸೆಲಿಂಗ್

ಸಿಇಟಿ ಪರೀಕ್ಷೆಯ ಫಲಿತಾಂಶ ಆ. 20ರಂದು ಪ್ರಕಟಆನ್​ಲೈನ್​ನಲ್ಲಿಯೇ ಕೌನ್ಸೆಲಿಂಗ್

Spread the love

ಬೆಂಗಳೂರು: ಕರ್ನಾಟಕದ ಸಿಇಟಿ ಪರೀಕ್ಷೆಯ ಫಲಿತಾಂಶ ಆ. 20ರಂದು ಪ್ರಕಟವಾಗಲಿದೆ. ಈ ಬಗ್ಗೆ ಡಿಸಿಎಂ ಡಾ. ಸಿ.ಎನ್. ಅಶ್ವಥ್ ನಾರಾಯಣ ಮಾಹಿತಿ ನೀಡಿದ್ದು, ಕಳೆದ ವರ್ಷ ಎಷ್ಟು ಶುಲ್ಕವನ್ನು ವಿಧಿಸಲಾಗುತ್ತಿತ್ತೋ ಈ ಬಾರಿಯೂ ಅಷ್ಟೇ ಶುಲ್ಕವಿರಲಿದೆ. ಹಾಗೇ, ಕಳೆದ ವರ್ಷದ ಅನುಪಾತದಲ್ಲೇ ಈ ವರ್ಷವೂ ಸೀಟು ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಜುಲೈ 30ರಿಂದ ಆಗಸ್ಟ್​ 1ರವರೆಗೆ ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಕರ್ನಾಟಕದ ಇತಿಹಾಸದಲ್ಲಿ ಮೊದಲ ಬಾರಿಗೆ ಪರೀಕ್ಷೆ ನಡೆದ ಕೇವಲ 19 ದಿನಗಳಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಲಾಗುತ್ತಿದೆ. ಈ ಬಾರಿ ಕೊರೋನಾದಿಂದಾಗಿ ಪರೀಕ್ಷೆಗಳೆಲ್ಲವೂ ತಡವಾಗಿ ನಡೆದಿರುವುದರಿಂದ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗೆ ಸೇರಲು ತೊಂದರೆಯಾಗಬಾರದು ಎಂಬ ಕಾರಣಕ್ಕೆ ತ್ವರಿತವಾಗಿ ಫಲಿತಾಂಶ ಪ್ರಕಟಿಸಲಾಗುತ್ತಿದೆ. cetonline.karnataka.gov.in ವೆಬ್​ಸೈಟ್​ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು ಎಂದು ಡಿಸಿಎಂ ಅಶ್ವಥ್ ನಾರಾಯಣ ಮಾಹಿತಿ ನೀಡಿದ್ದಾರೆ.

ಆ. 20ರಂದು ಸಿಇಟಿ ಪರೀಕ್ಷೆ ಫಲಿತಾಂಶವನ್ನು ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. cetonline.karnataka.gov.in

ಈ ಬಾರಿ ಶುಲ್ಕದಲ್ಲೂ ಯಾವುದೇ ಬದಲಾವಣೆ ಮಾಡಿಲ್ಲ. ಒಂದು ಸಂರಚನೆಯಲ್ಲಿ ಸಿಇಟಿ ವಿದ್ಯಾರ್ಥಿಗಳಿಗೆ ತಲಾ 65,360 ರೂ. ಹಾಗೂ ಕಾಮೆಡ್-ಕೆ ವಿದ್ಯಾರ್ಥಿಗಳಿಗೆ 1,43,748 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ. ಇನ್ನೊಂದರಲ್ಲಿ ಸಿಇಟಿ ವಿದ್ಯಾರ್ಥಿಗಳಿಗೆ 58,806 ರೂ. ಹಾಗೂ ಕಾಮೆಡ್‌-ಕೆ ವಿದ್ಯಾರ್ಥಿಗಳಿಗೆ 2,01,960 ರೂ. ನಿಗದಿ ಮಾಡಲಾಗಿದೆ ಎಂದು ಅಶ್ವಥ್ ನಾರಾಯಣ ಹೇಳಿದ್ದಾರೆ.

ರಾಜ್ಯದಲ್ಲಿ ಕೊರೋನಾ ಸಂಕಷ್ಟ ಇರುವುದರಿಂದ ಇಂಜಿನಿಯರಿಂಗ್ ಶುಲ್ಕವನ್ನು ಹೆಚ್ಚಳ ಮಾಡಿಲ್ಲ. ಕಳೆದ ವರ್ಷದ ಮಾದರಿಯಲ್ಲೇ ಈ ವರ್ಷವೂ ಸೀಟು ಹಂಚಿಕೆ ಮಾಡಲಾಗುವುದು. ರಾಜ್ಯದಲ್ಲಿ 45:30:25ರ ಅನುಪಾತದಲ್ಲಿ ಸೀಟು ಹಂಚಿಕೆ ಮಾಡಲು ಸೂಚಿಸಲಾಗಿದೆ. ಕೊರೋನಾ ಬಿಕ್ಕಟ್ಟು ನಿಯಂತ್ರಣಕ್ಕೆ ಬಾರದ ಕಾರಣ ಈ ಬಾರಿ ಆನ್​ಲೈನ್​ನಲ್ಲಿಯೇ ಸಿಇಟಿ ಕೌನ್ಸೆಲಿಂಗ್ ನಡೆಸಲಾಗುವುದು. ವಿದ್ಯಾರ್ಥಿಗಳು ತಾವು ಇರುವ ಜಾಗದಲ್ಲಿಯೇ ಆನ್​ಲೈನ್ ಮೂಲಕ ಕೌನ್ಸೆಲಿಂಗ್​ನಲ್ಲಿ ಪಾಲ್ಗೊಳ್ಳಬಹುದು ಎಂದು ಕೂಡ ಡಿಸಿಎಂ ತಿಳಿಸಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ